UN networks
ಕೊಣಾಜೆ : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ (70) ಎಂಬುವರನ್ನು ಗಾಂಜಾ ವ್ಯಸನಿಗಳ ತಂಡವೊಂದು ಕೊಂದು ಇರಾ ಸಮೀಪದ ಗುಡ್ಡವೊಂದರಲ್ಲಿ ಹೂತು ಹಾಕಿದ ಬಗ್ಗೆ ವರದಿಯಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ. ಪಲ್ಲಿಯಬ್ಬ ಅವರು ಗುರುವಾರ ಸಂಜೆಯಿಂದ ಕಾಣೆಯಾಗಿದ್ದರು. ಮನೆ ಸಮೀಪದ ಇಬ್ಬರು ಯುವಕರು ಹೊರ ಊರಿನ ಕೆಲವು ಮಂದಿಯ ಸಹಕಾರದಿಂದ ಕೊಂದು ಹೂತಿದ್ದರು ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನದವರೆಗೂ ಇವರ ಮೊಬೈಲ್ ರಿಂಗ್ ಆಗುತ್ತಿತ್ತು. ಬಳಿಕ ಸ್ವಿಚ್ಡ್ ಆಫ್ ಆಗಿತ್ತು. ಇದರಿಂದ ಸಂಶಯಗೊಂಡ ಪಲ್ಲಿಯಬ್ಬ ಅವರ ಸಂಬಂಧಿಕರು ಊರಿನ ಇಬ್ಬರು ಶಂಕಿತರನ್ನು ವಿಚಾರಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ.


