UN NEWS NETWORKS
ಉಳ್ಳಾಲ : ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದಲ್ಲಿ ತಡೆಯಿದ್ದ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಉಳ್ಳಾಲ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಇಂದು ನಡೆಯಲಿದ್ದು, ಅಧ್ಯಕ್ಷೆಯಾಗಿ ಕಾಂಗ್ರೆಸ್ ನ ಚಿತ್ರಾ ಚಂದ್ರಕಾಂತ್ ಮತ್ತು ಉಪಾಧ್ಯಕ್ಷರಾಗಿ ಐಯೂಬ್ ಮಂಚಿಲ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

1.30 ಗೆ ಚುನಾವಣೆ ಫಲಿತಾಂಶ ಹೊರಬಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ. ಎಸ್ ಡಿಪಿಐನಿಂದ ಜರೀನಾ ರವೂಫ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ರಮೀಜ್ ಕೋಡಿ ಮತ್ತು ಜೆಡಿಎಸ್ ನ ಜಬ್ಬಾರ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ 13 , ಪಕ್ಷೇತರ 2 , ಹಾಗೂ ಶಾಸಕ ಯು.ಟಿ ಖಾದರ್ ಅವರ ಬೆಂಬಲದಲ್ಲಿ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಬರಲಿದೆ ಅನ್ನುವ ಅಭಿಪ್ರಾಯ ಕಾಂಗ್ರೆಸ್ ಪಕ್ಷದ ವಲಯದಲ್ಲಿ ಕೇಳಿಬಂದಿದೆ.


