ತೊಕ್ಕೊಟ್ಟು: ಬಸ್ಸುಗಳೆರಡರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬಾಲಕಿಯರು ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಬಸ್ಸು ನಿಲ್ದಾಣದ ಸಮೀಪ ಸೋಮವಾರ ಸಂಜೆ ವೇಳೆ ಸಂಭವಿಸಿದೆ.
ಉಳ್ಳಾಲ ಕಡೆಗೆ ತೆರಳುತ್ತಿದ್ದ ಚೈತನ್ಯಾ ಮತ್ತು ರಿಹಾನಾ ಎಂಬವರು ಗಾಯಗೊಂಡಿದ್ದಾರೆ.

ಘಟನೆಯ ವಿವರ
ಮಂಗಳೂರಿನಿಂದ ಉಳ್ಳಾಲ ಕಡೆಗೆ ತೆರಳುತ್ತಿದ್ದ ಸಿಟಿ ಬಸ್ ಹಾಗೂ ಬಿ.ಸಿ.ರೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸರ್ವಿಸ್ ಬಸ್ಸುಗಳೆರಡರ ಮಧ್ಯೆ ಅಪಘಾತ ಸಂಭವಿಸಿದೆ. ಟೈಮಿಂಗ್ ವಿಚಾರದಲ್ಲಿ ಮಂಗಳೂರಿನಿಂದಲೇ ಅಡ್ಡಾದಿಡ್ಡಿಯಾಗಿ ಬಸ್ಸನ್ನು ಚಲಾಯಿಸಿದ ಉಳ್ಳಾಲದ ಸಿಟಿ ಬಸ್ಸಿನ ಚಾಲಕ ಏಕಾಏಕಿ ತೊಕ್ಕೊಟ್ಟು ಕೇಂದ್ರ ಬಸ್ಸ್ ನಿಲ್ದಾಣದಿಂದ ರಸ್ತೆಗೆ ತರುವ ಸಂದರ್ಭದಲ್ಲಿ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.








