Site icon Ullalavani

ನೈಟ್ ಕಫ್ಯೂ೯ ಜಾರಿ ಇಲ್ಲ: ಸಿಎಂ

UN networks

ಬೆಂಗಳೂರು: ಜನವರಿ ತಿಂಗಳಲ್ಲಿ ನೈಟ್ ಕಫ್ಯೂ೯ ಜಾರಿಗೊಳಿಸುವಂತಹ ಯಾವುದೇ ಯೋಚನೆ ಸರಕಾರದ ಮುಂದೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಜನವರಿ ತಿಂಗಳಲ್ಲಿ ಕೋವಿಡ್‌ ಎರಡನೇ ಅಲೆ
ಕೋವಿಡ್‌ ನಿಯಂತ್ರಣದ ನಿಟ್ಟಿನಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತದೆ ಎಂಬ ಸುದ್ದಿ ಹರಡಿತ್ತು ಈ ಸಂಬಂಧ ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು ಇಂತಹ ಯಾವುದೇ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.

ಕೋವಿಡ್‌ ಎರಡಲೇ ಅಲೆ ಜನವರಿ ತಿಂಗಳಲ್ಲಿ ಬರುವ ಸಾಧ್ಯತೆ ಇದ್ದು ಈ ನಿಟ್ಟಿನಲ್ಲಿ ಏನೆಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ವರದಿಯನ್ನು ಕೋವಿಡ್‌ ತಾಂತ್ರಿಕ ಸಮಿತಿ ನೀಡಿತ್ತು. ಕೆಲವೊಂದು ಶಿಫಾರಸುಗಳನ್ನು ಸಮಿತಿ ಸರ್ಕಾರಕ್ಕೆ ಸಲ್ಲಿಸಿತ್ತು. ಈ ಸುದ್ದಿಯನ್ನು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ನಿರಾಕರಣೆ ಮಾಡಿದ್ದರು.

ನೈಟ್ ಕರ್ಫ್ಯೂ ಇಲ್ಲದಿದ್ದರೂ ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಕೆಲವೊಂದು ನಿರ್ಬಂಧಗಳನ್ನು ಹೇರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಅಧಿಕೃತ ನಿರ್ಧಾರ ಕೈಗೊಳ್ಳದೆ ಇದ್ದರೂ ಪರಿಶೀಲನೆ ನಡೆಸಿ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

Exit mobile version