Site icon Ullalavani

ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ದೇವರ ವಾರ್ಷಿಕ ಮಹೋತ್ಸವ

UN networks

ಅಸೈಗೋಳಿ: ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ 33ನೇ ಶ್ರೀ ಅಯ್ಯಪ್ಪ ಸ್ವಾಮಿ ದೇವರ ವಾರ್ಷಿಕ ಮಹೋತ್ಸವವು ಮಂಜನಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ಟಿ.ವೆಂಕಟೇಶ್ ಭಟ್ ಅವರ ಪೌರೋಹಿತ್ಯದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ನಾರಾಯಣ ರೈ ಕಕ್ಕೆಮಜಲು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.
ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಅಧ್ಯಕ್ಷರಾದ ಶ್ರೀ ನಿವಾಸ್ ಶೆಟ್ಟಿ ಪುಲ್ಲು, ಕಾರ್ಯದರ್ಶಿ ರಾಮಕೃಷ್ಣ ಪಟ್ಟೋರಿ, ಜೊತೆ ಕಾರ್ಯದರ್ಶಿ ತ್ಯಾಗಂ ಹರೇಕಳ, ಶಿವಪ್ರಸಾದ್, ಪಟ್ಟೋರಿ ನಾಗಬ್ರಹ್ಮ ಭಜನಾ ಮಂಡಳಿಯ ಅಧ್ಯಕ್ಷ ರಾಜೇಶ್ ಕಾನ ಹಾಗೂ ಕೃಷ್ಣಪ್ಪ, ಆನಂದ ಗುರುಸ್ವಾಮಿ, ಜಗನ್ನಾಥ ಗುರುಸ್ವಾಮಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version