UN networks
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ66ರ ಕೋಟೆಕಾರು ಪೆಟ್ರೋಲ್ ಪಂಪ್ ಬಳಿ ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪಾದಾಚಾರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೋಟೆಕಾರ್ ನಿವಾಸಿ ಜಾನಿ(60) ಮೃತಪಟ್ಟ ಪಾದಾಚಾರಿಯಾಗಿದ್ದು, ಕೊಟೆಕಾರ್ ಪೆಟ್ರೋಲ್ ಪಂಪ್ ನ ಹತ್ತಿರ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಹೋಗುವ ರಸ್ತೆಯ ರಾಷ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ನಡೆದಿದ್ದು, ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಂಚರಿಸುತ್ತಿದ್ದ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅಪಘಾತದಿಂದ ಜಾನಿಯವರು ಡಾಂಬರ್ ರಸ್ತೆಗೆ ಬಿದ್ದು ಅವರ ತಲೆಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದು ಸ್ಥಳೀಯರು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ್ದು, ದಕ್ಷಿಣ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಕಾರು ಚಾಲಕ ಮಹಮ್ಮದ್ ಸಫ್ವಾನ್ ವಿರುದ್ಧ ಪ್ರಕರಣ ದಾಖಲಾಗಿದೆ.