Site icon Ullalavani

ಶಾಸಕ ಯು.ಟಿ ಖಾದರ್ ವಿರುದ್ಧ ಬಿಜೆಪಿ ದೂರು

UN networks

ಉಳ್ಳಾಲ: ಮಂಗಳೂರು ವಿಧಾನ ಸಭಾ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಹಾಗೂ ಬಾಳೆಪುಣಿ ಪಂಚಾಯತ್ ವ್ಯಾಪ್ತಿಯ ನಾಲ್ಕನೇ ವಾರ್ಡಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಶಾಸಕ ಯು.ಟಿ.ಖಾದರ್ ಸಾಧನೆಗಳ ಕುರಿತ ಕರಪತ್ರಗಳನ್ನು ಹಂಚುತ್ತಿದ್ದು ಈ ಬಗ್ಗೆ ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಅವರು ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅವರಿಗೆ ದೂರು ನೀಡಿದ್ದಾರೆ.

ಯು.ಟಿ.ಖಾದರ್ ಅವರ ಭಾವಚಿತ್ರವುಳ್ಳ ಮತ್ತು ಅವರ ಸಾಧನೆ, ಅಭಿವೃದ್ಧಿಯ ಬಗ್ಗೆ ಉಲ್ಲೇಖದ ಕರಪತ್ರಗಳನ್ನು ಮತದಾರರಿಗೆ ಹಂಚಿರುವುದಾಗಿ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದು, ಕರಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಚುನಾವಣಾಧಿಕಾರಿ ಮಂಗಳೂರು ಸಹಾಯಕ ಆಯುಕ್ತರಾದ ಮದನ್ ಮೋಹನ್ ಅವರಿಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಖಾದರ್ ಅವರನ್ನು ಪ್ರತಿನಿಧಿಸುವ ಮಂಗಳೂರು ಕ್ಷೇತ್ರದಲ್ಲಿ ಈ ರೀತಿಯ ಕರಪತ್ರಗಳು ಮತದಾರರ ಮನೆ ಮನೆ ಹರಿದಾಡುತ್ತಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

Exit mobile version