UN networks
ತೊಕ್ಕೊಟ್ಟು: ವೀರ ರಾಣಿ ಅಬ್ಬಕ್ಕಳ ಹೆಸರಿನಲ್ಲಿ ತೊಕ್ಕೊಟ್ಟಿನಲ್ಲಿ ಅಬ್ಬಕ್ಕ ಭವನ ನಿರ್ಮಾಣ ಕೈತಪ್ಪಿ ಹೋಗುವ ಸಾಧ್ಯತೆಯಿದ್ದು ಈ ಹಿನ್ನಲೆಯಲ್ಲಿ ಹೊಸ ವರ್ಷಕ್ಕೆ ತೊಕ್ಕೊಟ್ಟುವಿನಲ್ಲಿ ಮೌನ ಪ್ರತಿಭಟನೆ ಗೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಮುಂದಾಗಿದೆ
ಈ ನಿಮಿತ್ತ
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ತುರ್ತು ಸಭೆ ಕರೆದು ಪ್ರತಿಭಟನೆಗೆ ನಿರ್ಧಾರ ನಡೆಸಲಾಗಿದೆ.
2021ರ ಜ.1ರಂದು 9 ಗಂಟೆಗೆ ಅಬ್ಬಕ್ಕ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಪ್ರತಿಭಟನೆ ನಡೆಸಲಿ ಸಮಿತಿ ನಿರ್ಧರಿಸಿದ್ದು ಅಬ್ಬಕ್ಕ ಅಭಿಮಾನಿಗಳು ಮೌನ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡಲಾಗಿದೆ
ತೊಕ್ಕೊಟ್ಟು ಹೊಸ ಬಸ್ ನಿಲ್ದಾಣದ ಹತ್ತಿರವಿರುವ 41 ಸೆಂಟ್ಸ್ ಜಾಗದಲ್ಲಿ 9 ವರ್ಷವಾದರೂ ಅಬ್ಬಕ್ಕ ಭವನ ನಿರ್ಮಾಣಗೊಂಡಿಲ್ಲ. ತೊಕ್ಕೊಟ್ಟುವಿನ 41 ಸೆಂಟ್ಸ್ ಜಾಗವನ್ನು ಅಬ್ಬಕ್ಕ ಉತ್ಸವ ಸಮಿತಿ ಪ್ರಯತ್ನದಿಂದ ಅಬ್ಬಕ್ಕ ಭವನಕ್ಕೆ ಮೀಸಲು ಇರಿಸಲಾಗಿತ್ತು. ಕೂಡಲೇ ಭವನದ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.