UN networks
ತೊಕ್ಕೊಟ್ಟು: ವಿವಾದಿತ ಬೀಫ್ ಸ್ಟಾಲ್ ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನಾ ಸ್ಥಳಕ್ಕೆ ಉಳ್ಳಾಲ ನಗರಸಭೆಯ ಅಧ್ಯಕ್ಷೆ ಚಿತ್ರ ಚಂದ್ರಕಾಂತ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಇದೇ ಜಾಗದಲ್ಲಿ ಸದ್ಯ ದ ಮಟ್ಟಿಗೆ ಟೆಂಟ್ ಮಾದರಿಯಲ್ಲಿ ಬೀಫ್ ಸ್ಟಾಲ್ ಹಾಕಲು ಅನುಮತಿಯನ್ನು ನೀಡಲಾಗುವುದು.ನಿಮ್ಮ ಲೈಸನ್ಸ್ ರದ್ದಾಗಿಲ್ಲ ಆದರೆ ತಡೆ ಹಿಡಿಯಲಾಗಿದೆ. ಈ ಬಗ್ಗೆ ಸಂಬಂಧಿಸಿದ ಪಟ್ಟ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಆದಷ್ಟು ಬೇಗ ಇದೇ ಜಾಗದಲ್ಲಿ ಕಟ್ಟಡ ನಿರ್ಮಾಣವನ್ನು ನಗರಸಭೆ ಮಾಡಿ ಎಲ್ಲರಿಗೂ ವ್ಯಾಪಾರ ಕ್ಕೆ ಅನುಕೂಲ ಮಾಡಿಕೊಡಲಾಗುತ್ತದೆ.
ಅಕ್ರಮ ಬೀಫ್ ಸ್ಟಾಲ್ ಎಂದು ಆರೋಪಿಸಿ ಉಳ್ಳಾಲದ ಬಜರಂಗದಳ- ವಿಹಿಂಪ ಇತ್ತೀಚೆಗೆ ತೆರವಿಗೆ
ಪೊಲೀಸ್ ಇಲಾಖೆ ಮತ್ತು ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ನೀಡಿದ್ದರು.ಇದೀಗ ಎರಡು ಅಂಗಡಿಗಳಿಗೆ ಬೆಂಕಿ ಹಚ್ಚುವ ಕೆಲಸ ನಡೆದಿದೆ.


