Site icon Ullalavani

ತೊಕ್ಕೊಟ್ಟು: ಬೀಫ್ ಸ್ಟಾಲ್ ಗೆ ಬೆಂಕಿ‌ ಆರೋಪಿ ಪೊಲೀಸ್ ವಶಕ್ಕೆ

UN networks

ಮಂಗಳೂರು: ತೊಕ್ಕೊಟ್ಟು ಒಳಪೇಟೆಯ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಾಗರಾಜ್ (32)ಬಂಧಿತ ಆರೋಪಿಯಾಗಿದ್ದಾನೆ.

ತೊಕ್ಕೊಟ್ಟು ಒಳಪೇಟೆಯಲ್ಲಿ 4 ಬೀಪ್ ಸ್ಟಾಲ್ ಗಳಿಗೆ ಬೆಂಕಿ‌ ಹಚ್ಚಲಾಗಿತ್ತು. ಮೊಹಮ್ಮದ್ ಹನೀಫ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದರು. ಜ.8ರಂದು ರಾತ್ರಿ ಕೃತ್ಯ ನಡೆದಿದ್ದ ದಿನ ನಾಗರಾಜ್ ಆ ಭಾಗದಲ್ಲಿ ಸುತ್ತಾಡುವುದು ಕಂಡುಬಂದಿದ್ದರಿಂದ ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ, ತಾನೇ ಕೃತ್ಯ ಮಾಡಿದ್ದಾಗಿ ಒಪ್ಪಿದ್ದಾಗಿ ಹೇಳಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

Exit mobile version