UN networks
ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ಕಸ ಬಿಸಾಡುವವರ ವಿರುದ್ಧ ವೃಕ್ಷ ಎನ್ ಜಿ ಒ ನ ಬಾಸ್ಕಿಯಾಬ್ಸ್ ೯ ಯುವ ತಂಡದ ವತಿಯಿಂದ ಜಾಗೃತಿ ಜಾಥಾ ಎರಡನೇ ದಿನ ನಡೆಯಿತು.

ಸುಮಾರು 100 ರಷ್ಟು ಕಾರ್ಯಕರ್ತರು ನೇತ್ರಾವತಿ ಸೇತುವೆಯುದ್ದಕ್ಕೂ ಸಾಲಾಗಿ ನಿಂತು ಮೊಬೈಲ್ ಟಾಚ್೯ ಹಿಡಿದು ಕಸ ಬಿಸಾಡದಂತೆ ಎಚ್ಚರಿಕೆಯ ಜಾಗೃತಿ ಮೂಡಿಸಿದರು. ಪರಿಸರ ಮಾಲಿನ್ಯದ ವಿರುದ್ಧ ಸಂಸ್ಥೆ ಪರಿಣಾಮಕಾರಿಯಾಗಿ ಜಾಗೃತಿ ಜಾಥಾಗಳನ್ನು ನಡೆಸುತ್ತಾ ಬಂದಿದೆ. ಇತ್ತೀಚೆಗೆ ಬೆಂಗ್ರೆ ಸಮುದ್ರ ತೀರದಲ್ಲಿ ತ್ಯಾಜ್ಯದ ರಾಶಿ ವಿರುದ್ಧ ಜಾಗೃತಿಗೆ ಮುಂದಾದಾಗ, ಅಲ್ಲಿ ಶೇಖರಣೆಯಾಗುವ ತ್ಯಾಜ್ಯವೆಲ್ಲ ನೇತ್ರಾವತಿ ಸೇತುವೆಯಿಂದ ಎಸೆದದ್ದಾಗಿದೆ ಎಂಬುದು ಗೊತ್ತಾದ ಹಿನ್ನೆಲೆಯಲ್ಲಿ ನೇತ್ರಾವತಿ ಸೇತುವೆಯಲ್ಲೇ ಜಾಥಾ ಕೈಗೊಳ್ಳಲು ತೀರ್ಮಾನಿಸಿ, ಇಂದು ಎರಡನೇ ದಿನ ನಸುಕಿನಿಂದ ಕಾರ್ಯಕ್ರಮ ನಡೆಸಿದೆ.
ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಶೀನ ಶೆಟ್ಟಿ, ಬಿಗ್ ಬ್ಯಾಂಗ್ ಸಕ್ರಿಯ ಸದಸ್ಯ ಮಹಮ್ಮದ್ ಫೌಝಾನ್ ಶೇಖ್, ಹಸಿರುದಳ ನಾಗರಾಜ್ ರಾಘವ್ ಅಂಚನ್, ಎಪಿಡಿ ಫೌಂಡೇಶನ್ ನ ವಾಣಿಶ್ರೀ ಬಿ.ಆರ್ , ಮನಪಾ ಸದಸ್ಯೆ ವೀಣಾ ಉಪಸ್ಥಿತರಿದ್ದರು .




ಉಳ್ಳಾಲ ನಗರಸಭೆ ಆಯುಕ್ತರ ಕಾಳಜಿ
ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ ಅವರು ಎನ್ ಜಿಓ ಸದಸ್ಯರಿಗೆ ಕುಳಿತುಕೊಳ್ಳಲು ಕುರ್ಚಿಯ ವ್ಯವಸ್ಥೆಯನ್ನು ಕಲ್ಪಿಸಿದರು. ತಮ್ಮ ವ್ಯಾಪ್ತಿಗೆ ಸೇರಿದ ಭಾಗದಲ್ಲೂ ನೇತ್ರಾವತಿ ಸೇತುವೆಯಿಂದ ಎಸೆಯುವ ಕಸದಿಂದ ತೊಂದರೆಯಾಗುತ್ತಿದೆ. ಆದರೆ ಸೇತುವೆ ಮನಪಾ ವ್ಯಾಪ್ತಿಗೆ ಬರುವುದರಿಂದ ಯಾವುದೇ ಕ್ರಮಕೈಗೊಳ್ಳಲು ಅಸಾಧ್ಯ. ಈ ನಿಟ್ಟಿನಲ್ಲಿ ಸಮಾಜ ಸೇವಾ ಸಂಸ್ಥೆ ಜತೆಗೆ ಅಧಿಕಾರಿಯೂ ಕೈಜೋಡಿಸಿದರು


