UN networks
ಉಳ್ಳಾಲ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳು ಭಗವಾಧ್ವಜದ ಮೇಲೆ ಮಲ ಮೂತ್ರ ವಿಸರ್ಜಿಸಿ ಕಳವಿಗೆ ವಿಫಲ ಯತ್ನ ನಡೆಸಿದ್ದಾರೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ಸಂಜೆ ಉಳ್ಳಾಲ ಜಂಕ್ಷನ್ನಿನಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಮತ್ತು ಬಿಜೆಪಿ ಮುಖಂಡರ ಪತ್ರಿಕೆ ಜಾಹೀರಾತಿನಲ್ಲಿ ಅವಾಚ್ಯ ಶಬ್ದಗಳನ್ನು ಬರೆದಿರುವ ಪತ್ರ ಇರುವುದು ಬೆಳಕಿಗೆ ಬರುತ್ತಿದ್ದಂತೆ, ಇದೀಗ ಕೊಣಾಜೆ ಮಂದಿರದಲ್ಲಿ ದುಷ್ಕøತ್ಯ ಎಸಗಲಾಗಿದೆ. ಮಂದಿರದ ಬಾಗಿಲು ಒಡೆಯಲು ಯತ್ನಿಸಿದ ದುಷ್ಕರ್ಮಿಗಳು ಸ್ಥಳದಲ್ಲಿದ್ದಂತಹ ಭಗವಾಧ್ವಜಕ್ಕೆ ಮಲಮೂತ್ರ ವಿಸರ್ಜಿಸಿ ತೆರಳಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮೀಷನರ್ ಭೇಟಿ ನೀಡಿದ್ದಾರೆ. ಕಳವಿಗೆ ಯತ್ನಿಸಿರುವವರು ದುಷ್ಕøತ್ಯ ಎಸಗಿರುವ ಸಾಧ್ಯತೆ ಇದೆ ಎಂದು ತಿಳಿಸಿದರು.