UN networks
ಉಳ್ಳಾಲ: ಉಳ್ಳಾಲ ಶ್ರೀ ಕೊರಗಜ್ಜ ದೈವಸ್ಥಾನ ಹಾಗೂ ಕೊಣಾಜೆಯ ಮುಲಾರ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಧಾರ್ಮಿಕ ಭಾವನೆಗಳಿಗೆ ಅಪಚಾರ ಎಸಗಿದ ದುಷ್ಕರ್ಮಿಗಳನ್ನು ಪೊಲೀಸರು ಕೂಡಲೇ ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸುವಂತೆ ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತ್‌ಹೌಸ್ ಆಗ್ರಹಿಸಿದ್ದಾರೆ.


ಉಳ್ಳಾಲ ಕೊರಗಜ್ಜ ಕ್ಷೇತ್ರಕ್ಕೆ ಪರಿಶೀಲನೆಗೆ ಆಗಮಿಸಿದ ಮಂಗಳೂರು ಪೊಲೀಸ್ ಕಮೀಷನರ್ ರವರ ಬಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಉಳ್ಳಾಲದಲ್ಲಿ ಕಾಣಿಕೆ ಡಬ್ಬಿಗೆ ಬಿಜೆಪಿ ನಾಯಕರ ಭಾವಚಿತ್ರವಿರುವ ಕರಪತ್ರನ್ನು ವಿರೂಪಗೊಳಿಸಿ ಹಾಕಿರುವುದು ಮಾತ್ರವಲ್ಲದೆ ಕೊಣಾಜೆ ಮುಲಾರ ಶ್ರೀ ಗೋಪಾಲಕೃಷ್ಣ ಭಜನಾಮಂದಿರದಲ್ಲಿಯೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ದುಷ್ಕೃತ್ಯ ನಡೆಸಿರುವ ದುಷ್ಕರ್ಮಿಗಳನ್ನು ಪೊಲೀಸ್ ಇಲಾಖೆಯು ಸಮರ್ಥ ರೀತಿಯ ತನಿಖೆ ನಡೆಸಿ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕ್ಷೇತ್ರದಲ್ಲಿ ಶಾಂತಿಯುತ ವಾತಾವರಣ ನೆಲೆನಿಂತಿದ್ದು ಅದನ್ನು ಕದಡುವ ದುಷ್ಕೃತ್ಯವನ್ನು ಭಾರತೀಯ ಜನತಾ ಪಾರ್ಟಿಯು ಸಹಿಸುವುದಿಲ್ಲ ದುಷ್ಕರ್ಮಿಗಳನ್ನು ಮಟ್ಟ ಹಾಕಿ ಅವರ ಪ್ರಯತ್ನಗಳನ್ನು ವಿಫಲಗೊಳಿಸಲು ಪೊಲೀಸ್ ಇಲಾಖೆಗೆ ಎಲ್ಲಾ ರೀತಿಯ ಸಹಕಾರಗಳನ್ನು ನೀಡಲು ಪಕ್ಷ ತಯಾರಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿ ಹೇಮಂತ್ ಶೆಟ್ಟಿ, ಉಪಾಧ್ಯಕ್ಷ ಯಶವಂತ ಅಮೀನ್, ಮಾಜಿ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್., ಉಳ್ಳಾಲ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಆನಂದ ಶೆಟ್ಟಿ, ಉಳ್ಳಾಲ ಪುರಸಭೆ ಕೌನ್ಸಿಲರ್‌ಗಳಾದ ರೇಷ್ಮಾ ಜಗದೀಶ್, ಮಮತ, ಮಹಾಶಕ್ತಿ ಕೇಂದ್ರ ಪ್ರಮುಖ್ ಗಣೇಶ್, ಪ್ರಶಾಂತ್ ಗಟ್ಟಿ ಕೊಲ್ಯ ಮೊದಲಾದವರು ಉಪಸ್ಥಿತರಿದ್ದರು


