UN networks
ಉಳ್ಳಾಲ : ರಸ್ತೆ ದಾಟುತ್ತಿದ್ದ ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದ್ದು ಘಟನೆಯಲ್ಲಿ ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪಾಣೆಮಂಗಳೂರಿನ ನಿವಾಸಿ ಹಮ್ಮಬ್ಬ (60) ಮೃತ ದುರ್ದೈವಿ. ಇವರು ತೊಕ್ಕೊಟ್ಟಿನ ಸಹರಾ ಆಸ್ಪತ್ರೆ ಯ ಎದುರುಗಡೆ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಎದುರುಗಡೆಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ವೃದ್ದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತೊಕ್ಕೊಟ್ಟು ಬಳಿಯ ಕಲ್ಲಾಪಿನಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರೆನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


