UN networks
ಶಿರಾಡಿ: ಗ್ಯಾಸ್ ತುಂಬಿದ್ದ ಟ್ಯಾಂಕರೊಂದು ಪಲ್ಟಿಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ತಡೆಯುಂಟಾದ ಘಟನೆ ಮಂಗಳೂರು – ಬೆಂಗಳೂರು ರಸ್ತೆಯ ಶಿರಾಡಿ ಸಮೀಪದ ಕೆಂಪುಹೊಳೆ ಎಂಬಲ್ಲಿ ಶುಕ್ರವಾರ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ಘಟನೆಯಲ್ಲಿ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಹೆದ್ದಾರಿಯಲ್ಲಿ ಸಂಚಾರ ಬಂದ್ ಮಾಡಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಭೇಟಿ ನೀಡಿದ್ದು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಬುಲೇಟ್ ಟ್ಯಾಂಕರ್ ಸಂಚಾರದ ನಿಬಂಧನೆಗಳ ಕುರಿತು ಮಾಣಿಯಲ್ಲಿ ನಡೆದ ಘಟನೆ ನಂತರ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಇದೀಗ ಮತ್ತೊಂದು ಘಟನೆ ನಡೆದಿದೆ.


