UN networks
ಮಂಗಳೂರು: ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯ, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ, ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಪ್ರಾಯೋಜಕತ್ವದಲ್ಲಿ ಉಡುಪಿ ಜಿಲ್ಲಾ ಮಹಿಳಾ ಮೀನುಗಾರರಿಗೆ ಒಣ ಮೀನು ತಯಾರಿಕೆಯ ತರಬೇತಿ ಕಾರ್ಯಕ್ರಮ ಫೆ. 8 ಮತ್ತು 9 ರಂದು ಮಲ್ಪೆ ಮೀನು ವ್ಯಾಪಾರಸ್ಥರ ಸಮುದಾಯ ಭವನದಲ್ಲಿ ಬೆಳಿಗ್ಗೆ 9.30ಕ್ಕೆ ಉದ್ಘಾಟನೆಯಾಗಲಿದೆ.
ಕಾರ್ಯಕ್ರಮವನ್ನು ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಉದ್ಘಾಟಿಸಲಿದ್ದಾರೆ.
ಉಡುಪಿ ಶಾಸಕ ರಘುಪತಿ ಭಟ್, ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾ ಮಂಡಳಿ ನಿಯಮಿತ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ಡಾ| ಎ. ಸೆಂಥಿಲ್ ವೇಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ತರಬೇತಿ ಕಾರ್ಯಕ್ರಮದ ಮುಖ್ಯ ಸಂಯೋಜಕರಾಗಿ ಮೀನು ಸಂಸ್ಕರಣೆ ತಾಂತ್ರಿಕ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಡಾ| ಬಿ. ಮಂಜ ನಾಯ್ಕ ಭಾಗವಹಿಸಲಿದ್ದಾರೆ. ಇತರೆ ಸಂಯೋಜಕರುಗಳಾಗಿ ಮೀನು ಸಂಸ್ಕರಣೆ ತಾಂತ್ರಿಕ ವಿಭಾಗದ ಸಹಪ್ರಾಧ್ಯಾಪಕ ಡಾ| ಸಿದ್ದಪ್ಪಾಜಿ ಎಸ್., ಸಹಾಯಕ ಪ್ರಾಧ್ಯಾಪಕ ಡಾ| ಎ. ಮಂಜುನಾಥ ರೆಡ್ಡಿ, ಡಾ ಗಜೇಂದ್ರ, ಡಾ| ಎಂ.ವಿ ಚಂದ್ರ ಭಾಗವಹಿಸಲಿದ್ದಾರೆ