Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಂಬ್ಲಮೊಗರು

ತೊಕ್ಕೊಟ್ಟು : ಪ್ರಧಾನಿ ಕನಸಿನ ಆತ್ಮನಿರ್ಭರ್ ಯೋಜನೆ ಮಾದರಿಯಲ್ಲಿ ಗ್ರಾಹಕರ ಸ್ನೇಹಿ ಖಾಸಗಿ ಮಾರುಕಟ್ಟೆ

UllalaVaniBy UllalaVaniApril 9, 2021Updated:April 10, 2021No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
ಸುಸಜ್ಜಿತ ಮಾರುಕಟ್ಟೆ
ಉಪಸ್ಥಿತರಿದ್ದ ಉದ್ಯಮಿಗಳು
ನಗರಸಭೆ ಉಪಾಧ್ಯಕ್ಷ ಅಯೂಬ್ ಮಂಚಿಲ ಮಾಹಿತಿ ನೀಡಿದರು.
ಉಪಸ್ಥಿತರಿದ್ದ ಉದ್ಯಮಿಗಳು
ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರಮೋಟರ್ ಅಬೂಬಕರ್ ಸಿದ್ದೀಖ್
ಸುಸಜ್ಜಿತ ಮಾರುಕಟ್ಟೆ
ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರಮೋಟರ್ ಅಬೂಬಕರ್ ಸಿದ್ದೀಖ್
ಸುಸಜ್ಜಿತ ಮಾರುಕಟ್ಟೆ

ಉಳ್ಳಾಲ: ಬಡ ವ್ಯಾಪಾರಿಗಳ ಅನುಕೂಲಕ್ಕಾಗಿ ಮತ್ತು ಗ್ರಾಹಕರ ಸ್ನೇಹಿ ವ್ಯವಸ್ಥೆಯಾಗಿ ಕಲ್ಲಾಪು ರಾಷ್ಟ್ರೀಯ ಹೆದ್ದಾರಿ ಬಳಿ ಗ್ಲೋಬಲ್ ಕಮರ್ಷಿಯಲ್ ಸೆಂಟರ್ ಸ್ಥಾಪಿಸಲಾಗಿದೆ. ಪ್ರಧಾನಿ ಮೋದಿಯವರ ಕನಸಿನಂತೆ ಆತ್ಮನಿರ್ಭರ್ ಗೆ ಪೂರಕ ಮಾದರಿ ಯೋಜನೆಯಾಗಿದೆ ಎಂದು ಗ್ಲೋಬಲ್ ಕಮರ್ಷಿಯಲ್ ಸೆಂಟರ್ ನ ಅಬೂಬಕರ್ ಸಿದ್ದೀಖ್ ಹೇಳಿದರು.
ತೊಕ್ಕೊಟ್ಟು ಕಲ್ಲಾಪು ಮಾರುಕಟ್ಟೆಯಲ್ಲಿ ಶುಕ್ರವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು 5 ಎಕರೆ ಪ್ರದೇಶದಲ್ಲಿ 1.5 ಎಕರೆ ಪ್ರದೇಶವನ್ನು ವ್ಯಾಪಾರ ಉದ್ಯಮಕ್ಕೆ ಬಳಸಲಾಗಿದೆ. ಅದರಲ್ಲಿ 200 ರಷ್ಟು ತಾತ್ಕಾಲಿಕ ಶೆಡ್ ರೂಪದ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದೆ. ಹೊರ ಆವರಣದಲ್ಲಿ ರಖಂ ಮತ್ತು ಒಳಾಂಗಣದಲ್ಲಿ ಚಿಲ್ಲರೆ ಅಂಗಡಿಗಳಿರಲಿವೆ. ಉಳಿದ ಭಾಗವನ್ನು ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ಗೆ ಬಳಸಲಾಗುವುದು. ವ್ಯಾಪಾರಿಗಳಿಗೆ ಕೈಗೆಟಕುವ ಬಾಡಿಗೆ ಆಧಾರದಲ್ಲಿ ಯಾವುದೇ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗಿದೆ.
ವಿಶಿಷ್ಟ ಶೈಲಿಯಲ್ಲಿ ನಿರ್ಮಿಸಲಾದ ವಾಹನ ಚಾಲಕರಿಗೆ ವಿಶ್ರಾಂತಿ ಕೊಠಡಿ, ಒಂದು ಡಿಸ್ಪೆನ್ಸರಿ, ರಿಯಾಯಿತಿ ದರದ ಕ್ಯಾಂಟೀನ್, ಸ್ನಾನ ಗೃಹ, ಆಧುನಿಕ ಮಾದರಿಯ 30 ಶೌಚಾಲಯಗಳು ಇರಲಿವೆ. ಭದ್ರತೆ ದೃಷ್ಟಿಯಿಂದ ಸಿಸಿ ಕ್ಯಾಮರಾ, 8 ಭದ್ರತಾ ಸಿಬ್ಬಂದಿ ಕಾರ್ಯಾಚರಿಸಲಿದ್ದಾರೆ. ಪ್ರತಿ ಮಳಿಗೆಗೂ ವಿದ್ಯುತ್ ದೀಪ, ಸುತ್ತಲೂ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ. ನೆಲಕ್ಕೆ ಇಂಟರ್ ಲಾಕ್ ಅಳವಡಿಸಲಾಗಿದೆ. ಎಟಿಎಂ ಸಹಿತ ಬ್ಯಾಂಕಿಂಗ್ ವ್ಯವಸ್ಥೆ ಇರಲಿದೆ.
ಮಾರುಕಟ್ಟೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಹೊರಗೆ ಹಾಕದೇ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಗೆ ತ್ಯಾಜ್ಯ ಸಂಸ್ಕರಣಾ ಘಟಕ (ಎಸ್ ಟಿಪಿ) ಯನ್ನು ನಿರ್ಮಿಸಲಾಗಿದೆ. ದಿನದಲ್ಲಿ ಎರಡು ಬಾರಿ ಸ್ಯಾನಿಟೈಸೇಶನ್ ಮಾಡಲಾಗುವುದು. ಸ್ವಚ್ಛತೆಗೆ ವಿಶೇಷ ಆದ್ಯತೆಯ ಜೊತೆಗೆ ಸುತ್ತಲೂ ಗಿಡ ನೆಡುವ ಯೋಜನೆಯೂ ಇದೆ.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸ್ಥಳಕ್ಕೆ ಭೇಟಿ ವ್ಯವಸ್ಥೆ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಧಾನಿಯವರಿಗೆ ವರದಿಯನ್ನು ಕಳಿಸುವಂತೆಯೂ ತಿಳಿಸಿದ್ದಾರೆ. ಶಾಸಕ ಯು.ಟಿ ಖಾದರ್ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭ ಜಾಗದ ಮಾಲೀಕರ ಮನ್ಸೂರ್, ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಉಳ್ಳಾಲ ನಗರಸಭೆ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಉಪಾಧ್ಯಕ್ಷ ಅಯೂಬ್ ಮಂಚಿಲ, ಉದ್ಯಮಿಗಳಾದ ಪಿ.ಇಸ್ಮಾಯಿಲ್ ಅಹಮ್ಮದ್ ಎನ್.ಜಿ.ಸಿ, ಇಸ್ಮಾಯಿಲ್, ಮೊಯ್ದೀನ್, ಅಹಮ್ಮದ್ ಮನ್ಸೂರ್, ಇಬ್ರಾಹಿಂ, ನಗರಸಭೆ ಮಾಜಿ ಸದಸ್ಯ ಉಸ್ಮಾನ್ ಕಲ್ಲಾಪು, ಸ್ಥಳೀಯ ಆಸೀಫ್ ಉಪಸ್ಥಿತರಿದ್ದರು.

ಪ್ರಧಾನಿ ಕನಸು ನನಸು
ಪ್ರಧಾನಿಯ ಕನಸು ನನಸಾಗಿದೆ. ದೇಶದ ರೈತರ ಬೆಳೆಗೆ ಉತ್ತಮ ಬೆಲೆ ಸಿಗಬೇಕು ಅನ್ನುವ ಉದ್ದೇಶದಿಂದ ಜಾರಿಗೊಳಿಸಿರುವ ಕಾನೂನು ಇಲ್ಲಿ ಯಶಸ್ವಿಯಾಗಿದೆ. ರಾಜ್ಯದಲ್ಲಿ ಇದೊಂದು ಹೊಸ ಯೋಜನೆಯಾಗಿದೆ. ಜಿಲ್ಲಾಧಿಕಾರಿಯಿಂದಲೂ ಶ್ಲಾಘನೆಗೆ ಒಳಪಟ್ಟಿದೆ. ತ್ಯಾಜ್ಯ ವಿಲೇವಾರಿ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಿದಲ್ಲಿ ಯೋಜನೆ ಯಶಸ್ವಿಯಾಗಿ ಮುಂದುವರಿಯುವುದು.

ಚಂದ್ರಹಾಸ್ ಉಳ್ಳಾಲ್
ಅಧ್ಯಕ್ಷರು
ಶ್ರೀ ಚೀರುಂಭ ಭಗವತಿ ಕ್ಷೇತ್ರ
ಉಳ್ಳಾಲ

`ನಗರಸಭೆಯಿಂದ ಸರ್ವ ಸಹಕಾರ’ : ಅಯೂಬ್ ಮಂಚಿಲ
ವ್ಯಾಪಾರದ ಜೊತೆಗೆ ಸಾಮಾಜಿಕ ಕಳಕಳಿಯ ಯೋಜನೆ. ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ನಡೆದಿರುವುದು ಶ್ಲಾಘನೀಯ. ನ್ಯಾಯಬದ್ಧ ಕೆಲಸಕ್ಕೆ ನಗರಸಭೆಯಿಂದ ನ್ಯಾಯಬದ್ಧ ಸಹಕರಿಸುತ್ತೇವೆ. ರೈತರ ಉದ್ದೇಶಗಳಿಗೆ ಕೊರತೆಯಾಗದಂತೆ ನೋಡುತ್ತೇವೆ
ಐಯೂಬ್ ಮಂಚಿಲ
ಉಳ್ಳಾಲ ನಗರಸಭೆ ಉಪಾಧ್ಯಕ್ಷರು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d