Site icon Ullalavani

ದಾರಂದಬಾಗಿಲು : ಎಸ್‍. ಕೆ. ಡಿ. ಆರ್. ಪಿ ಸಿಬ್ಬಂದಿ ಅಪಘಾತದಲ್ಲಿ ಸಾವು

ಸಂತೋಷ್ (35)

ತೊಕ್ಕೊಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನೂತನವಾಗಿ ಸಿಬ್ಬಂದಿಯಾಗಿ ಆಯ್ಕೆಯಾಗಿದ್ದ ಪಿಲಾರು ದಾರಂದಬಾಗಿಲು ನಿವಾಸಿ ಸಂತೋಷ್ (35) ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸುರಿಬೈಲು ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸಹಸವಾರ ರಂಜಿತ್ ಗಾಯಗೊಂಡಿದ್ದಾರೆ. ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಪಿಕಪ್ ವಾಹನವನ್ನು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಸ್ಕೂಟರ್‍ಗೆ ಢಿಕ್ಕಿ ಹೊಡೆದಿದ್ದು, ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು.
ಬಂಟ್ವಾಳ ಸರಕಾರಿ ಆಸ್ವತ್ರೆಗೆ ಗಾಯಾಳುಗಳನ್ನು ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ (ಎಸ್ ಕೆ ಡಿ ಆರ್ ಪಿ)ಯಲ್ಲಿ ಸಿಬ್ಬಂದಿಯಾಗಿ ಆಯ್ಕೆಗೊಂಡಿದ್ದ ಇವರು ಧಾರವಾಡದಲ್ಲಿ ತರಬೇತಿ ಮುಗಿಸಿ ಇತ್ತೀಚೆಗೆ ಆಗಮಿಸಿದ್ದರು. ಮೃತರು ತಾಯಿ, ಇಬ್ಬರು ಸಹೋದರಿಯರು ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

Exit mobile version