

ಉಳ್ಳಾಲ: ಮಾಜಿ ಸಚಿವ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರು ದಾವಣಗೆರೆಯಲ್ಲಿ ಅಪಘಾತವಾಗಿದ್ದು ಖಾದರ್ ಅಪಾಯದಿಂದ ಪಾರಾಗಿದ್ದಾರೆ.
ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ಬಳಿಯ ಹೆಬ್ಬಾಳದ ರಾಷ್ಟ್ರೀಯ ಹೆದ್ದಾರಿ 4 ರ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಖಾದರ್ ಬೆಂಗಳೂರಿನಿಂದ ಬೆಳಗಾವಿ ಕಡೆಗೆ ಪ್ರಯಾಣಿಸುತ್ತಿದ್ದರು.
ಹಂಪ್ಸ್ ನಲ್ಲಿ ಮುಂದಿನಿಂದ ನಿಧಾನವಾಗಿ ಸಾಗುತ್ತಿದ್ದ ಕಂಟೇನರ್ ಲಾರಿಗೆ ಖಾದರ್ ಅವರ ಕಾರು ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಖಾದರ್ ಮತ್ತು ಕಾರಿನ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರಿನ ಮುಂಭಾಗ ಜಖಂ ಆಗಿದ್ದು ಖಾದರ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ದಾವಣಗೆರೆ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಕುರಿತು ದಾವಣಗೆರೆ ಎಸ್.ಪಿ ಹನಮಂತರಾಯ ಅವರೊಂದಿಗೆ ಖಾದರ್ ಅಪಘಾತದ ಮಾಹಿತಿ ನಡೆಸಿದರು.



