


















ಉಳ್ಳಾಲ: ಇತಿಹಾಸ ಪ್ರಸಿದ್ಧ ಒಂಭತ್ತು ಮಾಗಣೆ ಸೋಮೇಶ್ವರ ಶ್ರೀ ಸೋಮನಾಥ ಕ್ಷೇತ್ರದಲ್ಲಿ ನೂತನ ಬ್ರಹ್ಮರಥ ಸಮರ್ಪಣೆಯೊಂದಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ತೊಕ್ಕೊಟ್ಟು ಜೈ ವೀರಮಾರುತಿ ವ್ಯಾಯಾಮ ಶಾಲೆಯಿಂದ ಹೊರೆ ಕಾಣಿಕೆ ಹಾಗೂ ನೂತನ ಬ್ರಹ್ಮರಥದ ಭವ್ಯ ಮೆರವಣಿಗೆ ಶ್ರೀ ಕ್ಷೇತ್ರ ಸೋಮೇಶ್ವರದವರೆಗೆ ನಡೆಯಿತು.
ಜೈ ವೀರಮಾರುತಿ ವ್ಯಾಯಾಮ ಶಾಲೆಯಲ್ಲಿ ಮೆರವಣಿಗೆಗೆ ಶ್ರೀ ಕ್ಷೇತ್ರ ಉಳಿಯದ ಧರ್ಮದರ್ಶಿ ದೇವುಮೂಲ್ಯಣ್ಣ, ಶ್ರೀ ಕ್ಷೇತ್ರ ಮಾಣಿಲದಾಮದ ಶ್ರೀ ಮೋಹನ್‍ದಾಸ್ ಸ್ವಾಮೀಜಿ, ಸೋಮೇಶ್ವರ ಶ್ರೀ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ. ರವೀಂದ್ರನಾಥ ರೈ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮತಿ ಪದಾ„ಕಾರಿಗಳು, ಹೊರೆ ಕಾಣಿಕೆ ಸಮಿತಿ ಪದಾ„ಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ವಿವಿಧ ಸಂಘಟಟನೆಗಳ ಮುಖಂಡರು, ಧಾರ್ಮಿಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



