Site icon Ullalavani

ತೊಕ್ಕೊಟ್ಟು ಸ್ಮಾರ್ಟ್ ಸಿಟಿಯ ಐದು ಬಟ್ಟೆ ಅಂಗಡಿಗಳ ವಿರುದ್ಧ ಕೇಸ್

ತೊಕ್ಕೊಟ್ಟು ವಿನ ಸ್ಮಾರ್ಟ್ ಸಿಟಿ ವಾಣಿಜ್ಯ ಸಂಕೀರ್ಣ

ಉಳ್ಳಾಲ: ಕೊರೊನ ಎರಡನೇ ಅಲೆ ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ ಜಾರಿಗೊಳಿಸಿದ ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿದ
ತೊಕ್ಕೊಟ್ಟು ವಿನ ಸ್ಮಾರ್ಟ್ ಸಿಟಿ ವಾಣಿಜ್ಯ ಸಂಕೀರ್ಣದಲ್ಲಿದ್ದ ಐದು ಬಟ್ಟೆ ಅಂಗಡಿಗಳ ಮಾಲೀಕರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಟ್ಟೆ ಅಂಗಡಿ ಗಳು ಅರ್ಧ ಶಟರ್ ಹಾಕಿ ಗ್ರಾಹಕರನ್ನು ಸೇರಿಸಿ ವ್ಯಾಪಾರ ಮಾಡುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೆÇಲೀಸರು ದಾಳಿ ನಡೆಸಿ ಅಂಗಡಿ ಬಂದ್ ಮಾಡುವಂತೆ ಸೂಚಿಸಿದರು. ಪೆÇಲೀಸರ ಸೂಚನೆ ಬಳಿಕ ಮಾಲಕರು ಅಂಗಡಿ ಬಂದ್ ಮಾಡಿದ್ದಾರೆ. ಬಳಿಕ ಲಾಕ್ ಡೌನ್ ಉಲ್ಲಂಘನೆ ಆರೋಪದ ಅಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಐದು ಅಂಗಡಿ ಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ .ಅಲ್ಲದೇ ಬೇಕಾಬಿಟ್ಟಿ ಓಡಾಡುತ್ತಿದ್ದ ಒಟ್ಟು ಐದು ದ್ವಿಚಕ್ರ ವಾಹನ ಗಳನ್ನು ವಶಪಡಿಸಿಕೊಂಡಿದ್ದಾರೆ.

Exit mobile version