ಉಳ್ಳಾಲ: ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಆಗಿರುವ ವಾಯುಭಾರ ಕುಸಿತದ ಎಫೆಕ್ಟ್ ಉಳ್ಳಾಲಕ್ಕೂ ತಟ್ಟಿದೆ. 50 ಕ್ಕೂ ಅಧಿಕ ಮನೆಗಳು ಅಪಾಯದಂಚಿನಲ್ಲಿದ್ದರೆ, ಸೋಮೇಶ್ವರ ಹಿಂದೂ ರುದ್ರಭೂಮಿಯ ತಡೆಗೋಡೆ ಪಾಲಾಗಿದೆ.
ಉಳ್ಳಾಲದ ಸುಭಾಷನಗರ, ಕೈಕೋ, ಹಿಲೆರಿಯಾನಗರ, ಮುಕ್ಕಚ್ಚೇರಿ, ಒಂಭತ್ತುಕೆರೆ, ಸೋಮೇಶ್ವರ , ಉಚ್ಚಿಲ ಭಾಗದಲ್ಲಿ ಸಮುದ್ರದ ಅಲೆಗಳು ಕೆಲ ಮೀ. ಎದುರುಬಂದಿದೆ. ತೆಂಗಿನಮರಗಳು ಸಮುದ್ರಪಾಲಾದರೆ, ಸೋಮೇಶ್ವರದ ಹಿಂದೂ ರುದ್ರಭೂಮಿಯ ದೊಡ್ಡದಾದ ತಡೆಗೋಡೆ ಕಡಲಿಿಿಿನ ಪಾಲಾಗಿದೆ.



ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕಾರವಾರ ಸೇರಿದಂತೆ ಜಿಲ್ಲೆಯ ಕರಾವಳಿಯ ವಿವಿಧೆಡೆ ಮಳೆಯಾಗಲಿದೆ. ಸಮುದ್ರದ ಆಗ್ನೆಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 14 ರ ನಂತರ ಚಂಡಮಾರುತವಾಗಿ ಪರಿವರ್ತನೆಯಾಗಬಹುದು.ಹೀಗಾಗಿ ಮೇ. 15 ಹಾಗೂ 16 ರಂದು ಕರಾವಳಿ ಜಿಲ್ಲೆಗಳಲ್ಲಿ 120-200 ಮಿ.ಮೀ ಮಳೆ ಬೀಳುವ ಮುನ್ಸೂಚನೆಯಿದ್ದು, ಜಿಲ್ಲೆಯ ಎಲ್ಲಾ ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರದ ಕಡೆಗೆ ಬರದಿರುವಂತೆ ಎಚ್ಚರಿಕೆ ನೀಡಲಾಗಿದೆ.
ಮೀನುಗಾರಿಕೆಗೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ಮರಳುವಂತೆ ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯಿಂದ ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಂಬಂಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.


