UN networks
ಉಳ್ಳಾಲ: ಹಿಂದೂ ದೇವರುಗಳ ನಿಂದಿಸಿದ ತೊಕ್ಕೊಟ್ಟು ನಿವಾಸಿ ಉದ್ಯಮಿಯನ್ನು ಉಳ್ಳಾಲ ಪೊಲೀಸರು ಇಂದು ಬಂಧಿಸಿದ್ದಾರೆ.
ತೊಕ್ಕೊಟ್ಟು ಸ್ಮಾರ್ಟ್ ಸಿಟಿ ವಸತಿ ಸಂಕೀರ್ಣದಲ್ಲಿ ಇರುವ ಸ್ವಾಲಿಝ್ ಇಕ್ಬಾಲ್ (45) ಬಂಧಿತ. ಫರ್ನಿಚರ್ ಅಂಗಡಿ ಸಹಿತ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದ ಸ್ವಾಲಿಝ್ ಇಕ್ಬಾಲ್ ಚಾಮುಂಡೇಶ್ವರಿ ದೇವಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ವೀಡಿಯೋ ಮೂರು ದಿನಗಳಿಂದ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್ ಆಗುತ್ತಿದ್ದಂತೆ, ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟಕರು ದೂರು ದಾಖಲಿಸಿದ್ದರು. ಅದರಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿಯೂ ದೂರು ದಾಖಲಾಗಿದ್ದು, ಇಂದು ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.