
ಉಳ್ಳಾಲ: ಜೆಸಿಐ ಮಂಗಳಗಂಗೋತ್ರಿ ವತಿಯಿಂದ ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇತ್ತೀಚೆಗೆ ಜರಗಿದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ ಸಮಾರಂಭದಲ್ಲಿ 35 ವರ್ಷಗಳ ಕಾಲ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿ, ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಐದು ವರ್ಷಗಳಿಂದ ಸೇವೆಗೈದು, ಕೋವಿಡ್ ಎರಡನೇ ಅಲೆಯ ಸಂದರ್ಭ ಎರಡು ತಿಂಗಳುಗಳ ರಜೆಯನ್ನು ಪಡೆಯದೆ ಕರ್ತವ್ಯಕ್ಕೆ ಹಾಜರಾದ ಹಾಗೂ ಮೇ.31 ರಂದು ನಿವೃತ್ತಿ ಹೊಂದಲಿರುವ ಯೋಗಿನಿ ಕೆ.ಟಿ ಸುವರ್ಣ ಇವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ಹರೇಕಳ ಶ್ರೀ ರಾಮಕೃಷ್ಣ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರ ರೈ ಕಲ್ಲಿಮಾರು , ರೇಚಲ್ ಸಂಸ್ಥೆಯ ನಿರ್ದೇಶಕಿ ನಿರ್ಮಾ ಡಿಸೋಜ, , ಸ್ಥಾಪಕ ಅಧ್ಯಕ್ಷ ತ್ಯಾಗಂ ಹರೇಕಳ, ಕೊಣಾಜೆ ಮಂಗಳಗಂಗೋತ್ರಿ ಜೆಸಿಐ ಅಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹ, ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಡಾ. ಮಿಸ್ರಿಯಾ, ಲ್ಯಾಬ್ ಟೆಕ್ನಿಕಲ್ ಅಧಿಕಾರಿ ಜಲೀಲ್ ಇಬ್ರಾಹಿಂ, ಸಿಸ್ಟರ್ ಮರಿಯಮ್ಮ, ಪೆÇಸಕುರಲ್ ಸಂಸ್ಥೆ ನಿರ್ದೇಶಕ ವಿದ್ಯಾಧರ್ ಶೆಟ್ಟಿ, ಕಾರ್ಯದರ್ಶಿ ಪ್ರತಿಮಾ ಹೆಬ್ಬಾರ್, ನಿಕಟಪುರ್ವ ಅಧ್ಯಕ್ಷ ಪವಿತ್ರ ಗಣೇಶ್, ಜಯಲಕ್ಷ್ಮೀ, ಆರೀಫ್ ಕಲ್ಕಟ್ಟ, ವಲಯ ಮಂಡಳಿ ಸದಸ್ಯರುಗಳಾದ ಬಾದ್ ಷಾ ಸಾಂಬಾರುತೋಟ, ನಳಿನಿ, ವಸಂತ್ ರೈ ಉಪಸ್ಥಿತರಿದ್ದರು.

