Site icon Ullalavani

ಕೊರೋನ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ಪ್ರತಾಪ್ ಸಿಂಹ ನಾಯಕ್

ಮುಡಿಪು: ನಾವು ಕೊರೋನದ‌ ವಿರುದ್ಧ ಸಂಘಟಿತರಾಗಿ ಹೋರಾಡಿದರೆ ಕೊರೋನದ ಯಾವುದೇ ಅಲೆಯನ್ನು ಹೊಡೆದೋಡಿಸಬಹುದು. ಆತ್ಮಸ್ಥೈರ್ಯದೊಂದಿಗೆ ನಿಯಮಾವಳಿಗಳನ್ನು ಪಾಲಿಸಿಕೊಂಡು ಮುನ್ನಡೆದರೆ ಕೊರೋನ ಮೂರನೇ ಅಲೆಯನ್ನು ತಡೆಯಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರು ಹೇಳಿದರು.
ಅವರು ಮುಡಿಪುವಿನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಕುರ್ನಾಡು ಶಕ್ತಿ ಕೇಂದ್ರದ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಶನಿವಾರ ಮುಡಿಪುವಿನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಜಗತ್ತಿನಲ್ಲಿ ಚೀನಕ್ಕಿಂತ ಭಾರತದಲ್ಲಿಯೇ ತಯಾರಾದ ವ್ಯಾಕ್ಸಿನ್ ನ್ನು ಜನರು ಹೆಚ್ಚು ಅಪೇಕ್ಷೆ ಪಡುತ್ತಿದ್ದಾರೆ. ಭಾರತದ‌ ಆರೋಗ್ಯ ವೈಜ್ಞಾನಿಕ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡುತ್ತಿದೆ ಎಂದರು.
ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಇದರ ಅಧ್ಯಕ್ಷ ರಾದ ಸಂತೋಷ್ ಕುಮಾರ್ ಬೋಳಿಯಾರ್ ಅವರು ಮಾತನಾಡಿ, ಕೊರೋನ ಸಂದಿಗ್ಧ ಕಾಲದಲ್ಲಿ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ತರವಾದುದು. ಅವರ ಸೇವೆಯನ್ನು ಸಮಾಜ ಗುರುತಿಸಬೇಕು ಎಂದು ಹೇಳಿದರು.
ಹಿರಿಯ ಮುಖಂಡರಾದ ಟಿ.ಜಿ.ರಾಜಾರಾಮ ಭಟ್ ಅವರು ಮಾತನಾಡಿ, ಕೊರೋನ ಎರಡನೇ ಅಲೆ ಸಮಾಜದಲ್ಲಿ ಬಹಳಷ್ಟು ತೊಂದರೆಯನ್ನು ಕೊಟ್ಟಿದೆ. ಇಂತಹ ಸಂದರ್ಭದಲ್ಲಿ ಜನರೊಂದಿಗೆ ಬೆರೆತುಕೊಂಡು ಕೆಲಸ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಪಾತ್ರವೂ ಮಹತ್ತರವಾದುದು ಎಂದರು.
ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಅಲೆಮಾರಿ ಅರೆಅಲೆಮಾರಿ ನಿಗಮದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ
ಚಂದ್ರಹಾಸ್ ಪಂಡಿತ್ ಹೌಸ್, ಮುಖಂಡರಾದ ಈಶ್ವರ್ ಕಟೀಲ್, ಕ್ಯಾಂಪ್ಕೊ ನಿರ್ದೇಶಕ ಮಹೇಶ್ ಚೌಟ, ಕುರ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ದೇರಾಜೆ, ಸಜಿಪ ಪಡು ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ ಅಮೀನ್, ಜಯಂತ್ ಶೆಟ್ಟಿ ಕಂಬ್ಲಪದವು, ಗೋಪಾಲ್ ಬಂಗೇರ, ನಿತಿನ್ ಗಟ್ಟಿ ಕುರ್ನಾಡ್, ಶಿವಶಂಕರ್ ಭಟ್, ಜಯಂತ್ ಪಾದಲ್ಪಾಡಿ, ಬಿಜೆಪಿ ಮಂಗಳೂರು ಮಂಡಲ ಕಾರ್ಯದರ್ಶಿ ನವೀನ್ ಕುರ್ನಾಡು, ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುಜಿತ್ ಕಂಬ್ಲಪದವು, ಗಣೇಶ್ , ಶಶಿಧರ್ ಮೊದಲಾದವರು ಉಪಸ್ಥಿತರಿದ್ದರು.
ಕುರ್ನಾಡು ಶಕ್ತಿ ಕೇಂದ್ರದ ಸುರೇಶ್ ಬಂಗೇರ ಸ್ವಾಗತಿಸಿ, ನವೀನ್ ಪಾದಲ್ಪಾಡಿ ವಂದಿಸಿದರು.

Exit mobile version