
ಉಳ್ಳಾಲ: ಉಳ್ಳಾಲದ ಕೋಟೆಪುರ ಫಿಶ್ ಮಿಲ್ ಫ್ಯಾಕ್ಟರಿಯ ಹಿಂಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಸುಮಾರು3-4 ದಿನಗಳ ಹಿಂದೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿರುವ ಸಾಧ್ಯತೆ ಇದೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾರೀಸುದಾರರಿದ್ದಲ್ಲಿ ಉಳ್ಳಾಲ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

