Site icon Ullalavani

ಮಂಗಳೂರು ವಿ.ವಿಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾಪೂರ್ವ ಆನ್ಲೈನ್ ತರಬೇತಿ

ಕೊಣಾಜೆ : ಕರ್ನಾಟಕ ಸರ್ಕಾರದ ಶಿಕ್ಷಣ ಸುಧಾರಣೆಗಳ ಕಾರ್ಯಕ್ರಮದ ಅಡಿಯಲ್ಲಿ `ವಿದ್ಯಾರ್ಥಿಗಳು ಮತ್ತು ಪೆÇೀಷಕರಿಗೆ ಮಾನಸಿಕ ಸ್ಥೈರ್ಯ ಹಾಗೂ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾಪೂರ್ವ ಆನ್ಲೈನ್ ತರಬೇತಿ’ ಯನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಪೆÇೀಷಕರಾದ ಶಿಕ್ಷಣ ಸುಧಾರಣೆಗಳು ಕರ್ನಾಟಕ ಸರ್ಕಾರ ಹಾಗೂ ಪಿ. ಇ. ಎಸ್ . ವಿಶ್ವವಿದ್ಯಾನಿಯದ ಕುಲಾಧಿಪತಿ ಪೆÇ್ರ. ಎಂ. ಆರ್. ದೊರೆಸ್ವಾಮಿ ಭಾಗವಹಿಸಿದ್ದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ವಹಿಸಿ ತಮ್ಮ ಭಾಷಣದಲ್ಲಿ “ಕೋವಿಡ್ -19 ಸಂದಿಗ್ಧತೆಯ ಈ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಮುಖ್ಯವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಪೆÇೀಷಕರುಗಳಿಗೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಅವರಲ್ಲಿ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವುದು ನಮ್ಮ ಕರ್ತವ್ಯ. ಎಲ್ಲರೂ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರಿಸ್ಥಿತಿಯನ್ನು ಎದುರಿಸಬೇಕು. ಸುರಕ್ಷತೆ ಮತ್ತು ಜನರ ಹಿತದೃಷ್ಟಿಯಿಂದ ಸರ್ಕಾರವು ಕಾಲಕಾಲಕ್ಕೆ ತೆಗೆದುಕೊಳ್ಳುವ ಕ್ರಮಗಳನ್ನು ಅನುಸರಿಸಿ ಶೀಘ್ರದಲ್ಲಿ ಕೊರೊನಾಮುಕ್ತ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಕೈಜೋಡಿಸಬೇಕು. ಸಂಪನ್ಮೂಲ ವ್ಯಕ್ತಿಗಳು ನೀಡುವ ಸಲಹೆ ಸೂಚನೆಗಳನ್ನು ಪಾಲಿಸಿ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಿ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಕೊಳ್ಳಬೇಕು” ಎಂದು ಹೇಳಿದರು.
ರಾಮಕುಂಜದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಭಟ್ ಬಿಳಿನೆಲೆ ಈ ಬಾರಿಯ ಪರೀಕ್ಷಾ ವಿಧಾನ, ಪರೀಕ್ಷೆಗೆ ಹೇಗೆ ತಯಾರಿ ನೆಡೆಸಬೇಕು, ಉತ್ತಮ ಅಂಕಗಳನ್ನು ಗಳಿಸಲು ಶಿಸ್ತುಬದ್ಧವಾಗಿ ಹೇಗೆ ಅಭ್ಯಾಸ ಮಾಡಬೇಕು. ಗಣಿತ ಮತ್ತು ವಿಜ್ಞಾನದ ಸೂತ್ರಗಳನ್ನು ಹೇಗೆ ಸುಲಭವಾಗಿ ನೆನಪಿಟ್ಟುಕೊಳ್ಳಬೇಕು, ಗಣಿತ ಸಮಸ್ಯೆಗಳನ್ನು ಸರಳವಾಗಿ ಪರಿಹರಿಸುವ ಬಗೆ, ಉತ್ತಮ ಅಂಕಗಳನ್ನು ಗಳಿಸಿದರೆ ಇರುವ ಅವಕಾಶಗಳು, ಹೀಗೆ ಅನೇಕ ವಿಷಯಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ಮಂಗಳೂರು ವಿವಿ ವಸ್ತುವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಿಶ್ವನಾಥ ಟಿ, ಇವರು ಪರೀಕ್ಷೆಗೆ ಬೇಕಾದ ಮಾನಸಿಕ ಸಿದ್ಧತೆ, ಒತ್ತಡರಹಿತವಾಗಿ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಮಕ್ಕಳಿಗೆ ಚಿತ್ರಗಳ ಮೂಲಕ ಉಪನ್ಯಾಸವನ್ನು ಮಂಡಿಸಿದರು.
ವಿದಾರ್ಥಿಗಳು ಪ್ರಶ್ನೆಗಳನ್ನು ಕೇಳಿ ನೇರ ಸಂವಾದದಲ್ಲಿ ಭಾಗವಹಿಸಿದರು.
ಈ ವೇಳೆ ಕುಲಸಚಿವರಾದ ಪೆÇ್ರ. ಕಿಶೋರ್ ಕುಮಾರ್ ಸಿ. ಕೆ. , ಪರೀಕ್ಷಾಂಗ ಕುಲಸಚಿವರಾದ ಪೆÇ್ರ. ಪಿ. ಎಲ್. ಧರ್ಮ,, ಪೆÇ್ರ. ಬಿ. ನಾರಾಯಣ, ಹಣಕಾಸು ಅಧಿಕಾರಿಗಳು ಹಾಗೂ ದತ್ತು ಸ್ವೀಕೃತ ಹತ್ತು ಶಾಲೆಗಳ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಸಂಯೋಜಕರಾದ ಡಾ. ಪ್ರಶಾಂತ ನಾಯ್ಕ ಸ್ವಾಗತಿಸಿದರು. ನರಸಿಂಹಯ್ಯ ಎನ್ ಕಾರ್ಯಕ್ರಮ ನಿರೂಪಿಸಿದರು. ಡಾ. ಗೋವಿಂದರಾಜು ಬಿ. ಎಂ. ವಂದಿಸಿದರು.

Exit mobile version