Site icon Ullalavani

ಕೇರಳದಿಂದ 441 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು

ಉಳ್ಳಾಲ: ಕರ್ನಾಟಕದಲ್ಲಿ ಜು. 19ಮತ್ತು 22ರಂದು ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಿದ್ಧತೆ ನಡೆಯುತ್ತಿದ್ದು, ಕೇರಳ ರಾಜ್ಯದಿಂದ ದ.ಕ.ಜಿಲ್ಲೆಗೆ 441 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು ಮಂಗಳೂರು ತಾಲೂಕು ವ್ಯಾಪ್ತಿಗೆ ತಲಪಾಡಿ ಗಡಿಭಾಗದಿಂದ 22 ಪರೀಕ್ಷಾ ಕೇಂದ್ರಗಳಿಗೆ ಸುಮಾರು 125 ವಿದ್ಯಾರ್ಥಿಗಳು ಹಾಜರಾಗಲಿದ್ದು, ಗಡಿ ಚೆಕ್‍ಪೆÇೀಸ್ಟ್‍ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶಪತ್ರ ತೋರಿಸಿ ಗಡಿ ಪ್ರವೇಶ್ಕಕೆ ಅನುಮತಿ ನೀಡಿದ್ದು, ತಲಪಾಡಿಯಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾ„ಕಾರಿ ಪ್ರಶಾಂತ್ ಕುಮಾರ್ ಕೆ.ಎಸ್. ತಿಳಿಸಿದರು.
ಅವರು ಶನಿವಾರ ದ.ಕ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ, ದೈಹಿಕ ಶಿಕ್ಷಣ ಅ„ಕಾರಿ ರಘುನಾಥ್ ಅವರೊಂದಿಗೆ ತಲಪಾಡಿ ಗಡಿಭಾಗದಲ್ಲಿ ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.
ಈಗಾಗಲೇ ಪರೀಕ್ಷೆಗೆ ಆಗಮಿಸುವ ಗಡಿಭಾಗದ ಎಲ್ಲಾ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದು, ಶೇ. 40 ವಿದ್ಯಾರ್ಥಿಗಳು ಹೆತ್ತವರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಸೂಚನೆ ನೀಡಿದ್ದು ಅವರಲ್ಲಿ ಹೆತ್ತವರಿಗೆ ಗಡ ಪ್ರವೇಶಕ್ಕೆ ಆರ್‍ಟಿಪಿಸಿಆರ್ ಕಡ್ಡಾಯ ಮಾಡಲಾಗಿದೆ. ಮಂಗಳೂರು ತಾಲೂಕಿಗೆ ತೌಡುಗೋಳಿ ಭಾಗದಿಂದ ಮಂಜನಾಡಿಯಾಗಿ ನಾಲ್ವರು ವಿದ್ಯಾರ್ಥಿಗಳು ಮಾತ್ರ ಇದ್ದು ಅವರು ಹೆತ್ತವರೊಂದಿಗೆ ಆಗಮಿಸುತ್ತಾರೆ ಉಳಿದ 121 ವಿದ್ಯಾರ್ಥಿಗಳಿಗೆ ತಲಪಾಡಿಯಲ್ಲಿ ಮೂರು ಬಸ್ ಸೇರಿದಂತೆ ಕಾರುಗಳ್ನು ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ವಿದ್ಯಾರ್ಥಿಗಳು ಸೋಮೇಶ್ವರ, ಕೋಟೆಕಾರು ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆಗೆ ಹಾಜರಾಗಲಿದ್ದಾರೆ. ವಿದ್ಯಾರ್ಥಿಗಳಿಗೆ ಗಡಿಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಆಗತ್ಯಕ್ರಮವನ್ನು ಕೈಗೊಳ್ಳಲಾಗಿದೆ ಎಂದ ಅವರು ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳು ಮತ್ತು ಹೆತ್ತವರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದರು.

Exit mobile version