ಉಳ್ಳಾಲ: ಯೇನೆಪೊಯ ಮೊಯ್ದಿನ್ ಕುಂಞ ಮೆಮೋರಿಯಲ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ನ ಘಟಕವಾಗಿರುವ ಯೇನೆಪೊಯ ಫೌಂಡೇಶನ್ ಹಾಗೂ ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಅಡಿಯಲ್ಲಿ 2021-22 ರ ಶೈಕ್ಷಣಿಕ ವರ್ಷಕ್ಕೆ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಮೆರಿಟ್ ಆಧಾರಿತ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಿಡಿಎಸ್, ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಫಾರ್ಮ, ಡಿ.ಫಾರ್ಮ, ಬಿಎಎಂಎಸ್, ಬಿಹೆಚ್ ಎಂ ಎಸ್, ಬಿಎನ್‍ವೈಎಸ್, ಬಿಹೆಚ್ ಎಂ ಎಸ್, ಬಿಎನ್ ವೈಎಸ್, ಬಿ.ಕಾಂ/ಬಿಬಿಎ/ಬಿಸಿಎ, ಬಿಹೆಚ್‍ಎ, ಬಿಪಿಹೆಚ್, ಬಿಎಸ್ಸಿ ಪ್ಯಾರ ಮೆಡಿಕಲ್ ಕೋರ್ಸುಗಳು, ಬಿಎಸ್ಸಿ ಹಾಸ್ಪಿಟಾಲಿಟಿ ಸೈನ್ಸ್, ಬಿಎಸ್ಸಿ ಕ್ಲಿನಿಕಲ್ ಸೈಕಾಲಜಿ, ಬಿಎಸ್ಸಿ ಫಾರೆನ್ಸಿಕ್ ಸೈನ್ಸ್, ಬಿಎಸ್ಸಿ ಮೈಕ್ರೋಬಯಾಲಜಿ, ಸ್ನಾತಕೋತ್ತರ ಪದವಿ ಕೋರ್ಸುಗಳ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು, ದ.ಕ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ವ್ಯಾಸಾಂಗ ಮಾಡಿದ ಗ್ರೇಡ್ 10, 11,12 ರಲ್ಲಿ ಶೇ.80 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮುಸ್ಲಿಂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆ.30ರ ಒಳಗೆ scholarship.yenepoya.in ನೋಂದಾಯಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

