Site icon Ullalavani

ತಲಪಾಡಿ ಗಡಿಯಲ್ಲಿ ಜಿಲ್ಲಾಧಿಕಾರಿಯವರ ಭೇಟಿ, ಪರಿಶೀಲನೆ

ಉಳ್ಳಾಲ: ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಗಡಿಭಾಗವಾದ ದಕ್ಷಿಣ ಕನ್ಬಡದಲ್ಲೂ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ಬಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಪರಿಶೀಲಿಸಲು ಶುಕ್ರವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಪರಿಶೀಲಿಸಿದ ಅವರು ಗಡಿಭಾಗದಲ್ಲಿ ಕೇರಳದಿಂದ ಜಿಲ್ಲೆಗೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಳವಾಗಿದ್ದು ಈಗಾಗಲೇ ಲಸಿಕೆ ಹಾಕಿದವರಿಗೆ ಮತ್ತು ನೆಗೆಟಿವ್ ವರದಿ ಇರುವವರಿಗೆ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶವಿದ್ದು, ಈ ಮಾರ್ಗಸೂಚಿಯನ್ಬು ಇನ್ಬಷ್ಟು ಕಟ್ಟು ನಿಟ್ಡು ಮಾಡುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು , ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕೆಲವೊಂದು ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಸರಕಾರದ ಮಾರ್ಗದರ್ಶನದಂತೆ ಇನ್ನೆರಡು ದಿನಗಳಲ್ಲಿ ಕೋವಿಡ್ ಗೆ ಸಂಬಂಧಿಸಿದ ಹೊಸ ಮಾರ್ಗಸೂಚಿಯನ್ಬು ಜಿಲ್ಲಾಡಳಿತ ರೂಪಿಸಲಿದೆ ಎಂದರು
ಈಗಾಗಲೆರ ಜಿಲ್ಲೆಯಲ್ಲಿ ದಿನವೊಂದಕ್ಕೆ 9000 ಜನರ ಪರೀಕ್ಷೆಗೆ ಟಾರ್ಗೆಟ್ ಇಟ್ಟುಕೊಂಡಿದ್ದು ಪ್ರತೀ ದಿನ ಏಳು ಸಾವಿರದಿಂದ ಎಂಟು ಸಾವಿರದವರೆಗೆ ಪರೀಕ್ಷೆ ನಡೆಸಲಾಗುತ್ತಿದೆ ಮುಂದಿನ ದಿನಗಳ್ಲಲ್ಲಿ ಹೆಚ್ಚುವರಿ ತಂಡವನ್ಬು ರಚಿಸಿ ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗುವುದು ಇದರೊಂದಿಗೆ ಕೋವಿಡ್ ದೃಡವಾದವರಿಗೆ ಹೋನ್ ಐಸೊಲೆಷನ್ ನೊಂದಿಗೆ ಕೋವಿಡ್ ಕೇರ್ ಸೆಂಟರ್ ಗೆ ಕಡ್ಡಾಯವಾಗಿ ದಾಖಲಾಗಲು ಸೂಚಿಸಲಾಗುವುದು ಎಂದರು
ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್ ಗುರುಪ್ರಸಾದ್, ಟಿಎಚ್ಒ ಡಾ. ಸುಜಯ್ ಭಂಡಾರಿ, ವೈದ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Exit mobile version