Site icon Ullalavani

ಡಾ. ರವಿರಾಜ ಶೆಟ್ಟಿ ಜಿ. ಯವರಿಗೆ ಜೀವ ವೈವಿಧ್ಯ ಕ್ಷೇತ್ರದ ವಿಶೇಷ ಸಾಧಕ ಪ್ರಶಸ್ತಿ ಪುರಸ್ಕಾರ

UN networks

ಉಳ್ಳಾಲ: ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಉಳ್ಳಾಲದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ರವಿರಾಜ ಶೆಟ್ಟಿ ಜಿ. ಯವರಿಗೆ ಕರ್ನಾಟಕ ಜೀವ ವೈವಿಧ್ಯ ಮಂಡಳಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಸಾಮಾಜಿಕ ಅರಣ್ಯ ವಿಭಾಗ ಮಂಗಳೂರು ಇವರ ವತಿಯಿಂದ “ ಜೀವ ವೈವಿಧ್ಯ ಕ್ಷೇತ್ರದ ವಿಶೇಷ ಸಾಧಕ ಪ್ರಶಸ್ತಿ ” ನೀಡಿ ಗೌರವಿಸಲಾಗಿದೆ.


ಸೆ. 3 ರಂದು ಮಂಗಳೂರು ಜಿಲ್ಲಾ ಪರಿಷತ್ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಜೀವ ವೈವಿಧ್ಯ ದಿನಾಚರಣೆ ಅಭಿಯಾನ-2021 ರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಡಾ. ರವಿರಾಜ ಶೆಟ್ಟಿ ಜಿ ಇವರು ಅಳಿವಿನಂಚಿನಲ್ಲಿರುವ ಪಶ್ಚಿಮ ಘಟ್ಟದ ಔಷಧೀಯ ಗಿಡಗಳ ಸಂರಕ್ಷಣೆ ಕುರಿತ ಸಂಶೋಧನೆ, ವಿಸ್ತರಣೆ, ಬೋಧನೆ ಹಾಗೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಿಸಿರುವ ವೈಜ್ಞಾನಿಕ ಸಂಶೋಧನಾ ಲೇಖನಗಳು, ಸ್ನಾತಕೋತ್ತರ ಮತ್ತು ಪಿಎಚ್.ಡಿ ವಿದ್ಯಾರ್ಥಿಗಳ ಸಂಶೋಧನೆಗೆ ನೀಡಿದ ಮಾರ್ಗದರ್ಶನ, ವಿದೇಶಗಳಿಗೆ ನೀಡಿದ ವೃತ್ತಿಪರ ಭೇಟಿ ಹಾಗೂ ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿ ಮಂಡಿಸಿರುವ ಸಂಶೋಧನಾ ಪ್ರಬಂಧಗಳ ಆಧಾರದ ಮೇಲೆ ಈ ಪ್ರಶಸ್ತಿಗೆ ಭಾಜನರಾಗಿರುತ್ತಾರೆ.

Exit mobile version