UN networks
ಮುಡಿಪು : ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಕಾಲೇಜಿನಿಂದ ಬಂದು ಮನೆಯ ಕಡೆ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊರ್ವಳನ್ನು ಅಡ್ಡಗಟ್ಟಿ ಕಿರುಕುಳ ನೀಡಿ ಘಟನೆ ಮಂಗಳವಾರ ನಡೆದಿದ್ದು, ಘಟನೆಗೆ ಸಂಬಂದಿಸಿದಂತೆ ಕೊಣಾಜೆ ಪೊಲೀಸರು ಆರೋಪಿಯೊರ್ವನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಣ್ಣೂರು ನಿವಾಸಿ ಯಾಕೂಬ್ (43)ಎಂದು ಗುರುತಿಸಲಾಗಿದೆ. ಯುವತಿಯೋರ್ವಳು ಮದ್ಯಾಹ್ನ ಕಾಲೇಜು ಮುಗಿಸಿ ಮನೆ ಕಡೆಗೆ ಹೋಗುತ್ತಿದ್ದಾಗ ಯಾಕೂಬ್ ಅಡ್ಡಗಟ್ಟಿ ಆಕೆಯ ಕೈ ಎಳೆದು ಅಪ್ಪಿಕೊಳ್ಳಲು ಮುಂದಾಗಿದ್ದ ಎನ್ನಲಾಗಿದೆ., ಈ ಸಂದರ್ಭ .ಪ್ರತಿಭಟಿಸಿದ ಯುವತಿ ಆತನಿಂದ ತಪ್ಪಿಸಿ ಬೊಬ್ಬೆ ಹೊಡೆದು ಓಡಿ ಹೋಗಿದ್ದಳು. ಯುವತಿಯ ಬೊಬ್ಬೆ ಕೇಳಿದ ಗ್ರಾಮಸ್ಥರು ಆರೋಪಿಯನ್ನು ಹಿಡಿಯಲು ಯತ್ನಿಸಿದ್ದು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಎಲಿಯಾರ್ ಪದವು ಎಂಬಲ್ಲಿ ಆರೋಪಿ ಯಾಕೂಬ್ ನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


