Site icon Ullalavani

ತೊಕ್ಕೊಟ್ಟು ಫ್ಲೈಓವರ್ನಲ್ಲಿ ಲಾ ರಿ- ಓಮ್ನಿ ಅಪಘಾತ

UN networks

ತೊಕ್ಕೊಟ್ಟು; ಲಾರಿ ಹಾಗೂ ಓಮ್ನಿ ನಡುವೆ ಅಪಘಾತ ನಡೆದ ಘಟನೆ ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ.

ಕೇರಳ ಕಡೆಗೆ ಸರಕು ಸಾಗಾಟ ನಡೆಸುತ್ತಿದ್ದ ಲಾರಿಯ ಟಯರ್ ಫ್ಲೈಓವರ್ ನಲ್ಲಿ ಪಂಕ್ಚರ್ ಆಗಿತ್ತು. ಲಾರಿಯನ್ನು ಅಲ್ಲೇ ನಿಲ್ಲಿಸಿ ದುರಸ್ತಿ ನಡೆಸುತ್ತಿದ್ದ ಸಂದರ್ಭ ಹಿಂಬದಿಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರಿನ ಚಾಲಕನ ಗಮನಕ್ಕೆ ಬಾರದೆ ಲಾರಿ ಹಿಂಬದಿಗೆ ಢಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಘಟನೆಯಿಂದಾಗಿ ರಾ.ಹೆ 66 ರಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು. ನಾಗುರಿ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Exit mobile version