UN networks
ಉಳ್ಳಾಲ: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಹಾಗೂ ಉಚ್ಚಿಲದಲ್ಲಿ 19 ಹರೆಯದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಸಿಸಿಬಿ ಹಾಗೂ ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ ಅಬ್ದುಲ್ ರಾಶಿಕ್(22) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ರಾಝಿಕ್ ಬುಧವಾರ ಬೆಳಗ್ಗೆ ವೇಳೆ 14ರ ಹರೆಯದ ವಿದ್ಯಾರ್ಥಿನಿ ತನ್ನ ತಂಗಿಯೊಂದಿಗೆ ತಲಪಾಡಿ ಅಲಂಕಾರ ಗುಡ್ಡೆಯಿಂದ ಕಾಲ್ನಡಿಗೆಯ ಮೂಲಕ ತಲಪಾಡಿ ಚೆಕ್ ಪೋಸ್ಟ್ ರಸ್ತೆಯಾಗಿ ಶಾಲೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕನೋರ್ವ ಆಕೆಯ ಕೈ ಎಳೆದು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದಲ್ಲದೆ ಅದೇ ದಿನ ಬೆಳಗ್ಗೆ ಉಚ್ಚಿಲದಲ್ಲಿ ಕಾಲೇಜಿಗೆ ಹೋಗುತ್ತಿದ್ದ 19 ಹರೆಯದ ಯುವತಿಯೊಬ್ಬಳಿಗೆ ಯುವಕನೋರ್ವ ಕಿರುಕುಳ ನೀಡಿದ್ದ ಬಗ್ಗೆ ಸಂತ್ರಸ್ತೆ ಪೊಲೀಸ್ ದೂರು ನೀಡಿದ್ದಳು. ಎರಡೂ ದೂರಿನ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ಸಿಸಿಟಿವಿ ಆಧಾರದಲ್ಲಿ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಗುರುವಾರ ಬೆಳಗ್ಗೆ ಕೆ.ಸಿ.ರೋಡ್’ನಲ್ಲಿ ಆರೋಪಿ ರಾಶಿಕ್ ಅನ್ನು ಬಂಧಿಸಿದ್ದಾರೆ. ಈತನ ವಿರುದ್ಧ ಪೋಕ್ಸೊ ಕಾಯಿದೆಯಡಿ ಎರಡು ಪ್ರಕರಣಗಳು ದಾಖಲಾಗಿವೆ.
