ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಮುಡಿಪು:ಗ್ರಾಮ ಪಂಚಾಯತ್ ಸದಸ್ಯರು ಸಮರ್ಪಕವಾಗಿ ತಮ್ಮ ಜವಾಬ್ದಾರಿ ನಿರ್ವಹಿಸುವ ಮೂಲಕ ಭ್ರಷ್ಟಾಚಾರ ತೊಡೆದು ಹಾಕಲು ಪ್ರಯತ್ನಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ಜೆ.ಆರ್.ಲೋಬೊ ಅಭಿಪ್ರಾಯಪಟ್ಟರು.
ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಮಂಗಳೂರು ದಕ್ಷಿಣ ವಾರ್ಡ್ ಸಮಿತಿಯಿಂದ ಭಾನುವಾರ ಮುಡಿಪು ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರದ ಸಭಾಂಗಣದಲ್ಲಿ ಕೆಥೊಲಿಕ್ ಸಮುದಾಯದ ಜನಪ್ರತಿನಿಧಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.
ಕೆಥೊಲಿಕ್ ಸಭಾ ಕೇಂದ್ರೀಯ ಸಮಿತಿ ರಾಜಕೀಯ ಸಂಚಾಲಕ ಜೆರಾಲ್ಡ್ ಡಿಕೋಸ್ತ, ಕೆಥೊಲಿಕ್ ಸಭಾ ಕೇಂದ್ರೀಯ ಸಮಿತಿ ಅಧ್ಯಕ್ಷೆ ಪ್ಲೇವಿ ಡಿ.ಸೋಜ, ಮಾಜಿ ಅಧ್ಯಕ್ಷ ವಲೇರಿಯನ್ ಡಿಸೋಜ ಮಜಿಕಟ್ಟ ಪಾವೂರು, ಪಾನೀರ್ ಚರ್ಚ್ ಧರ್ಮಗುರು ವಿಕಾರ್ ಡೆನ್ನಿಸ್ ಮೋರಸ್, ಮಾರ್ಸೆಲ್ ಡಿಸೋಜ, ರೋಶನ್ ಡಿ’ಸೋಜ, ಕೆಥೊಲಿಕ್ ಸಭಾ ನಿರ್ದೇಶಕ ರೆ.ಫಾ.ಜೆ.ಬಿ.ಸಲ್ದಾನ, ಸರ್ಕಾರಿ ಡಿ ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹಾ,
ಕೆಥೊಲಿಕ್ ಸಭಾ ಮಂಗಳೂರು ದಕ್ಷಿಣ ಅಧ್ಯಕ್ಷ ವಿನ್ಸೆಂಟ್ ಡಿಸೋಜ ಧರ್ಮನಗರ ಬೋಳಿಯಾರ್ ಸ್ವಾಗತಿಸಿದರು. ಜೋಸೆಫ್ ಡಿಸೋಜ ಸನ್ಮಾನಿತರ ಹೆಸರು ಓದಿದರು. ಕಾರ್ಯದರ್ಶಿ ಸುನಿಲ್ ಡಿಸೋಜ ಬೋಳ ವಂದಿಸಿದರು. ಫೆಲಿಕ್ಸ್ ಅಮ್ಮೆಂಬಳ ಕಾರ್ಯಕ್ರಮ ನಿರೂಪಿಸಿದರು.