ಮಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳ ಸುತ್ತಮುತ್ತ ವಿಧಿಸಿದ್ದ ಸೆಕ್ಷನ್ 144ರ ಅನ್ನು ಮಾ.14ರಿಂದ ಮಾ.19ರವರೆಗೆ ವಿಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಹಿಜಾಬ್ ಕೇಸರಿ ಶಾಲು ವಿವಾದ ಉಚ್ಚ ನ್ಯಾಯಾಲಯದಲ್ಲಿ ಇನ್ನೂ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈ ವಿವಾದಕ್ಕೆ ಸಂಬಂಧಿಸಿ ಅಹಿತಕರ ಘಟನೆ ನಡೆದಿರುವುದರಿಂದ
ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳ ಸುತ್ತಲಿನ 200ಮೀ ವ್ಯಾಪ್ತಿ ಪ್ರದೇಶದಲ್ಲಿ ಮತ್ತೆ ಮಾ.14ರ ಬೆಳಗ್ಗೆ 6ರಿಂದ ಮಾ.19ರ ಸಂಜೆಯವರೆಗೆ ನಿಷೇಧಾಜ್ಞೆ ಮುಂದುವರಿಸಿ ಆದೇಶಿಸಲಾಗಿದೆ.
ಈ ಹಿಂದೆ ಮಾ.8 ರಿಂದ ಮಾ.12ರವರೆಗೆ ನಿಷೇಧಾಜ್ಞೆ ವಿಧಿಸಲಾಗಿತ್ತು. ಅದು ಈಗ ಮುಂದುವರೆದಿದೆ.

