Site icon Ullalavani

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮತ್ತೊಂದು ವಿವಾದ!

UN networks

ಮಂಗಳೂರು:  ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ಭಾರತ ಮಾತಾ ಪೂಜನಾ ಕಾರ್ಯಕ್ರಮಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು ಕಾರ್ಯಕ್ರಮ ರದ್ದುಗೊಳಿಸುವಂತೆ ಮಂಗಳೂರು ವಿವಿ ಅಗ್ರಹಿಸಿದೆ.‌

ಭಾರತ ಮಾತೆ ಕೇಸರಿ ಧ್ವಜ ಹಿಡಿದ ಫೋಟೋ ಬಳಸಿದ್ದಕ್ಕೆ ಸಿಎಫ್ ಐ, ಕಾಂಗ್ರೆಸ್, ಡಿವೈ ಎಫ್ ಐ ನಿಂದ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಏನಿದು ಕಾರ್ಯಕ್ರಮ:

ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಅಗಸ್ಟ್ 11ರಂದು ಕಾಲೇಜಿನ‌ ವಿದ್ಯಾರ್ಥಿ ಸಂಘದಿಂದ ಭಾರತ ಮಾತಾ ಪೂಜನಾ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಪೋಸ್ಟರ್ ನಲ್ಲಿ ಭಾರತ ಮಾತೆ ಕೇಸರಿ ಧ್ವಜ ಹಿಡಿದ ಚಿತ್ರವನ್ನು ಹಾಕಲಾಗಿತ್ತು. ಭಾರತ ಮಾತೆಯ ಕೈಯ್ಯಲ್ಲಿ ರಾಷ್ಟ್ರಧ್ವಜದ ಬದಲು ಭಗವಾಧ್ವಜ ಹಿಡಿದಿರೋ ಚಿತ್ರ ಬಳಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಈ ಬಗ್ಗೆ ಕೇಸರಿ ಧ್ವಜ ಹಿಡಿದ ಚಿತ್ರದ ಪೋಸ್ಟರನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಪೋಸ್ಟರ್ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದು,  ಇದು
ವಿದ್ಯಾರ್ಥಿಗಳ‌ ಮಧ್ಯೆ ಬಿರುಕು ಮೂಡಿಸುವ ಕಾರ್ಯಕ್ರಮ ಇದನ್ನು ರದ್ದುಪಡಿಸುವಂತೆ ಅಗ್ರಹ ಕೇಳಿ ಬಂದಿದೆ.

ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತ ಬಳಸದಂತೆ  ಹೈಕೋರ್ಟ್ ಸೂಚನೆ ನೀಡಿದ ಹಿನ್ನಲೆಯಲ್ಲಿ ಕುಲಪತಿಗಳು ಎಚ್ಚೆತ್ತುಕೊಂಡು ಕಾರ್ಯಕ್ರಮ ರದ್ದುಪಡಿಸಲು ಅಗ್ರಹಿಸಿದ್ದಾರೆ..

Exit mobile version