UN networks
ಸುರತ್ಕಲ್ : ರಕ್ಷಾ ಬಂಧನದ ಪ್ರಯುಕ್ತ ವಿದ್ಯಾರ್ಥಿಗಳ ಕೈಗೆ ಕಟ್ಟಿದ ರಾಖಿಯನ್ನು ತೆಗೆಸಿ ಕಸದ ಬುಟ್ಟಿಗೆ ಹಾಕಿದ ಕಾಟಿಪಳ್ಳದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಪೋಷಕರು ಮತ್ತು ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಗುರುವಾರದಂದು ರಕ್ಷಾಬಂಧನ ಹಿನ್ನೆಲೆ ಕೈಗೆ ರಾಖಿ ಕಟ್ಟಿಕೊಂಡು ಶಾಲೆಗೆ ವಿದ್ಯಾರ್ಥಿಗಳು ಬಂದಿದ್ದರು
ಇದನ್ನು ಗಮನಿಸಿದ ಶಾಲೆಯ ಕೆಲ ಶಿಕ್ಷಕರು ರಾಖಿಯನ್ನು ತೆಗೆಸಿ ಕೆಲ ಕಸದ ಬುಟ್ಟಿಗೆ ಎಸೆದಿದ್ದರು ಎಂಬ ಆರೋಪ ಕೇಳಿ ಬಂದಿದೆ . ಈ ಹಿನ್ನಲೆಯಲ್ಲಿ ಪೋಷಕರು ಮತ್ತು ಬಿಜೆಪಿ ಕಾರ್ಯಕರ್ತ
ಶಾಲೆಗೆ ಆಗಮಿಸಿ ಮುಖ್ಯಶಿಕ್ಷಕ ಮತ್ತು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂದು ಶಾಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರೇ ಮತ್ತೆ ಮಕ್ಕಳ ಕೈಗೆ ರಕ್ಷೆ ಕಟ್ಟುವಂತೆ ಪೋಷಕರ ಪಟ್ಟು ಹಿಡಿದ್ದು,ಪೋಷಕರು ಮತ್ತು ಶಿಕ್ಷಕರ ನಡುವೆ ವಾಗ್ವಾದದ ಹೆಚ್ಚಾದ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಫ್ರೆಂಡ್ ಶಿಪ್ ಬ್ಯಾಂಡ್ ಅಂದುಕೊಂಡು ತೆಗೆಸಿದ್ದು ರಕ್ಷಾ ಬಂಧನವನ್ನು ಯಾವುದೇ ಕಾರಣಕ್ಕೂ ತೆಗಿಸುವುದಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.
ಕೆಲವರು ತಿಳಿಯದೇ ಬೇಜವಾಬ್ದಾರಿಯಿಂದ ವರ್ತಿಸಿ ವಿವಾದ ಸೃಷ್ಟಿಸಿದ್ದಾರೆ. ಈ ಬಗ್ಗೆ ಪೋಷಕರು ಮತ್ತು ಶಿಕ್ಷಕರ ಜೊತೆ ಸಭೆ ಮಾಡಿದ್ದೇವೆ. ಈ ವೇಳೆ ತಪ್ಪು ಮಾಡಿದವರು ಪಶ್ಚಾತ್ತಾಪ ಪಟ್ಟು ಕ್ಷಮೆ ಕೇಳಿದ್ದಾರೆ. ಈಗ ಸಮಸ್ಯೆ ಪರಿಹಾರವಾಗಿ ಸುಖಾಂತ್ಯ ಕಂಡಿದೆ
ಈ ಬಗ್ಗೆ ಅನಾವಶ್ಯಕವಾಗಿ ಯಾರೂ ಮಾತನಾಡದೇ ಸುಖಾಂತ್ಯಕ್ಕೆ ಸಹಕರಿಸಿ
ಫಾ.ಸಂತೋಷ್ ಲೋಬೋ
ಶಾಲಾ ಸಂಚಾಲಕ
ಕಾಟಿಪಳ್ಳದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆ


