UN networks
ಉಳ್ಳಾಲ: ತೊಕ್ಕೋಟ್ಟು ಭಟ್ನಗರ ಜೈವೀರ ಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ 62 ನೇವರ್ಷದ ತೊಕ್ಕೋಟ್ಟು ಮೊಸರು ಕುಡಿಕೆಯ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ತೊಕ್ಕೋಟ್ಟು ಅಂಬೇಡ್ಕರ್ ರಂಗ ಮಂದಿರದಲ್ಲಿ ನಡೆಯಿತು.
ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಎ.ಜೆ.ಶೇಖರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷ ಸುರೇಶ್ ಚೌಟ ಕಕ್ಕೆಮಜಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಯು.ಟಿ.ಖಾದರ್, ಕರ್ನಾಟಕ ರಾಜ್ಯ ಅಲೆಮಾರಿ ಅರೆ-ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು , ಮೈಸೂರು ಇಲೆಕ್ಟ್ರಿಕಲ್ಸ್ ಮತ್ತು ಇಂಡಸ್ಟ್ರೀಸ್ ಲಿ. ಬೆಂಗಳೂರು ಇದರ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಸದಸ್ಯ ಕೆ.ಟಿ. ಸುವರ್ಣ, ಉಳ್ಳಾಲ ಅಬ್ಬಕ್ಕ ಉತ್ಸವ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಉಳ್ಳಾಲ ನಗರ ಸಭೆ ಅಧ್ಯಕ್ಷ ಚಿತ್ರಕಲಾ ಚಂದ್ರಕಾಂತ್, ಸಿವಿಲ್ ಇಂಜಿನಿಯರ್ ಯತೀಶ್ ಹೊಸಗದ್ದೆ, ಸಿ.ಪಿ.ಐ.ಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ತೊಕ್ಕೋಟ್ಟು ಓವರ್ ಬ್ರಿಡ್ಜ್ ಶ್ರೀ ಕೊರಗಜ್ಜ ಸೇವಾ ಸಮಿತಿಯ ಅಧ್ಯಕ್ಷ ಮೋಹಂದಾಸ್ ಕಾಪಿಕಾಡ್, ಜೈವೀರ ಮಾರುತಿ ವ್ಯಾಯಾಮ ಶಾಲೆಯ ಟ್ರಸ್ಟ್ ಅಧ್ಯಕ್ಷ ವಿಠಲ್ ಶ್ರೀಯಾನ್, ಟ್ರಸ್ಟಿ ಸುಂದರ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು ಸಂತ ಆಗ್ನೇಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ| ಅರುಣ್ ಉಳ್ಳಾಲ್ ಧಾರ್ಮಿಕ ಉಪನ್ಯಾಸಗೈದರು.
ಇದೇ ಸಂದರ್ಭದಲ್ಲಿ ಆಟೋಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಜೈವೀರಮಾರುತಿ ವ್ಯಾಯಾಮ ಶಾಲೆಯ ಟ್ರಸ್ಟಿ ಶಿವರಾಂ ತೊಕ್ಕೋಟ್ಟು ಸ್ವಾಗತಿಸಿದರು.ಕೃಷ್ಣ ಪೆÇನ್ನತ್ತೋಡು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


