UN networks
ಉಳ್ಳಾಲ: ಉಚ್ಚಿಲ ಸಂಕೊಳಿಗೆಯ ಭಗವತೀ ಆಂಗ್ಲ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಸಭೆ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸುಷ್ಮಾ ವಿ. ಕಿಣಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಭಗವತೀ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷ ದಿನಕರ್ ಉಳ್ಳಾಲ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಭಗವತೀ ಎಜ್ಯುಕೇಶನ್ ಟ್ರಸ್ಟ್‍ನ ಕಾರ್ಯದರ್ಶಿ ಚಂದ್ರಹಾಸ್ ಉಳ್ಳಾಲ್, ಭಗವತೀ ವಿದ್ಯಾ ಸಂಸ್ಥೆಯ ಸಂಚಾಲಕ ಸದಾಶಿವ ಉಳ್ಳಾಲ್, ಕೋಟೆಕಾರ್ ಬ್ಲಾಕ್ ಆರೋಗ್ಯ ಅಧಿಕಾರಿ ಲಲಿತ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಕವಿತಾ ಸುರೇಶ್, ಉಪಾಧ್ಯಕ್ಷೆ ಸುಪ್ರಿಯಾ ಉಪಸ್ಥಿತರಿದ್ದರು.
ಭಗವತೀ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ ಸ್ವಾಗತಿಸಿದರು. ಸುಚಿತಾ ಶೆಟ್ಟಿ ವರದಿ ವಾಚಿಸಿದರು. ಶಿಕ್ಷಕರಾದ ಸುಚಿತ್ರಾ ಮತ್ತು ರೋಶನಿ ಕೆ. ಕಾರ್ಯಕ್ರಮ ನಿರ್ವಹಿಸಿದರು. ನಿವೇದಿತಾ ವಂದಿಸಿದರು.


