UN networks
ಮಂಗಳೂರು: ಸೆಪ್ಟೆಂಬರ್ 2ರಂದು ನವಮಂಗಳೂರು ಬಂದರಿನ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದು ತದ ನಂತರ ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಇದರ ಜಾಗ ಪರಿಶೀಲನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬುಧವಾರದಂದು ನಡೆಸಿದರು.
ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಕಮಿಷನರ್ ಶಶಿಕುಮಾರ್ ಸೇರಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಳಿನ್ ಕುಮಾರ್ ಗೆ ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಸಾಥ್ ನೀಡಿದ್ದಾರೆ.
ಪೆಂಡಾಲ್ ಹಾಕುವ ಜಾಗ, ಪಾರ್ಕಿಂಗ್ ಹಾಗೂ ತುರ್ತು ಹೆಲಿಪ್ಯಾಡ್ ನಿರ್ಮಾಣ ಸಂಬಂಧ ಪರಿಶೀಲನೆ ನಡೆಸಲಾಗಿದೆ.
ಅಧಿಕೃತ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸುವ ಪ್ರಧಾನಿ ನೇತೃತ್ವದಲ್ಲಿ ಬೃಹತ್ ಸಮಾವೇಶವು ನಡೆಯಲಿದ್ದು ಫಲಾನುಭವಿಗಳ ಸಮಾವೇಶದಲ್ಲಿ
ಲಕ್ಷಾಂತರ ಕಾರ್ಯಕರ್ತರನ್ನು ಸೇರಿಸಿ ಬಿಜೆಪಿಯಿಂದ ಮಹಾಶಕ್ತಿ ಪ್ರದರ್ಶನವೂ ನಡೆಯಲಿದೆ.
ಕೊಚ್ಚಿಯ ಕಾರ್ಯಕ್ರಮ ಮುಗಿಸಿ 3.45ಕ್ಕೆ ಮಂಗಳೂರಿಗೆ ಆಗಮಿಸಿ ನಂತರ ಸಂಜೆ 5 ಗಂಟೆಗೆ ಸಮಾವೇಶ ನಡೆಸಲು ಬಿಜೆಪಿ ಯೋಜನೆಯನ್ನು ಹಾಕಿದೆ.
