Site icon Ullalavani

ಮೋದಿ ಭೇಟಿ ಹಿನ್ನಲೆ‌ ಜಿಲ್ಲಾಡಳಿತದಿಂದ ಅಧಿಕಾರಿಗಳ ಸಭೆ

UN networks

ಮಂಗಳೂರು: ಸೆ.2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ  ಜನಪ್ರತಿನಿಧಿಗಳ ಸಭೆ ನಡೆಯಿತು.

ಕೇಂದ್ರದ ಯೋಜನೆಗಳ ಫಲಾನುಭವಿಗಳನ್ನು ಕಾರ್ಯಕ್ರಮ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ಹಾಗೂ ಭದ್ರತೆಯ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಯಿತು.

ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಜಿಲ್ಲಾಧಿಕಾರಿ,ಪೊಲೀಸ್ ಕಮೀಷನರ್, ಎಸ್.ಪಿ ಸೇರಿದಂತೆ ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದಾರೆ.

ನವಮಂಗಳೂರು ಬಂದರಿನಲ್ಲಿ ಕೇಂದ್ರ ಸರ್ಕಾರದ 3,600 ಕೋಟಿ ಯೋಜನೆಗಳಿಗೆ ಚಾಲನೆಯನ್ನು ನೀಡಿ ಬಳಿಕ ನಗರದ ಗೋಲ್ಡ್ ಪಿಂಚ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

Exit mobile version