UN networks
ಉಳ್ಳಾಲ: ಪ್ರತಿಭಾ ಕಾರಂಜಿಯಲ್ಲಿ ದೇರಳಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಯೋರ್ವ ಮಾಡಿದ ಭಾಷಣದ ವೀಡಿಯೋ ಎಲ್ಲೆಡೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ಆತನ ಹಾಸ್ಯಭರಿತ ಮಾತುಗಳು ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಆ.23 ರಂದು ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ನಲ್ಲಿ ದೇರಳಕಟ್ಟೆ ವಲಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಗಳಿಗೆ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ , ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇರಳಕಟ್ಟೆ ಏಳನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಅಫ್ವಾನ್ ಹಾಸ್ಯಭರಿತ ಭಾಷಣ ಎಲ್ಲೆಡೆ ವೈರಲ್ ಆಗುತ್ತಿದೆ. ‘ ತರಗತಿಯಲ್ಲಿ ಕುಳಿತು ಮಾತನಾಡುತ್ತಿದ್ದಾಗ ಕೈ ಹಿಡಿದು ಎಬ್ಬಿಸಿದ ಶಿಕ್ಷಕಿ ಮುಂದೆ ನಿಂತು ಮಾತನಾಡುವಂತೆ ಹೇಳಿದ್ದಾರೆ, ಕುಳಿತು ಮಾತನಾಡಿದರೆ ಕೇಳೋದಿಲ್ಲ , ನಿಂತು ಮಾತನಾಡು ಅಂದಿದ್ದಾರೆ. ಅದಕ್ಕಾಗಿ ಪ್ರತಿಭಾ ಕಾರಂಜಿಯ ಭಾಷಣದಲ್ಲಿ ಮಾತನಾಡುತ್ತಿದ್ದೇನೆ. ಶಾಲೆಯಲ್ಲಿ ಚಿಕ್ಕಿ ತಿಂದೆ ಎಂದು ಶಾಲೆಯಲ್ಲಿ ನೀಡುವ ಬಾಳೆಹಣ್ಣನ್ನೇ ನೀಡಲಿಲ್ಲ. ಕುರಿಮರಿ ಯಾರದ್ದೆಂದು ಪ್ರಶ್ನಿಸಿದ ಶಿಕ್ಷಕಿಗೇ ಕುರಿಯದ್ದೇ ಮರಿ ಅಂದಾಗ ಕಣ್ಣು ದೊಡ್ಡದಾಗಿ ನೋಡಿದ ಸನ್ನಿವೇಶ , ಎಲ್ಲಾ ವಿಚಾರಗಳನ್ನು ಹಾಸ್ಯಭರಿತವಾಗಿ ಆಡಿದ ಅಫ್ವಾನ್ ಮಾತಿಗೆ ಇಡೀ ಸಭೆ ನಗೆಗಡಲಲ್ಲಿ ತೇಲಿತ್ತು. ಈತನ ಮಾತುಗಳನ್ನು ಶಿಕ್ಷಕಿಯೋರ್ವರು ಮೊಬೈಲ್ ಮೂಲಕ ಚಿತ್ರೀಕರಿಸಿ, ಸೋಷಿಯಲ್ ಮೀಡಿಯಾದಲ್ಲಿ ಹಾಕಿರುವುದು ಇದೀಗ ಎಲ್ಲೆಟೆ ವೈರಲ್ ಆಗಿದೆ.
ಸರಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ವೇದಿಕೆಗೆ ಅಂಜದೆ ಮಾತನಾಡಬೇಕೆಂದು ಎಲ್ಲಾ ವಿದ್ಯಾರ್ಥಿ ಗಳಿಗೆ ಹೇಳುತ್ತಾ ಬಂದಿದ್ದೇನೆ. ಯಾವುದೇ ವಿಷಯದ ಮೇಲಿನ ಭಾಷಣ ಅವರೊಳಗಿನ ಪ್ರತಿಭೆಯನ್ನು ಹೊರತರುವುದಿಲ್ಲ. ಅವರೊಳಗಿನ ಮಾತುಗಳು ಅಂಜಿಕೆಯಿಲ್ಲದೆ ಹೊರಬಂದಾಗ ಪ್ರತಿಭೆ ಅನ್ವೇಷಣೆ ಸಾಧ್ಯ. ಅದಕ್ಕಾಗಿ ಮೂವರು ವಿದ್ಯಾರ್ಥಿ ಗಳಿಗೆ ಅವಕಾಶ ಕೊಟ್ಟಿದ್ದೆವು. ಅದರಲ್ಲಿ ಅಫ್ವಾನ್ ದ್ವಿತೀಯ ಸ್ಥಾನವನ್ನು ಗಳಿಸಿದ್ದಾನೆ.
ಆಲಿಸ ವಿಮಲಾ
ಮುಖ್ಯೋಪಾಧ್ಯಾಯಿನಿ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ
ದೇರಳಕಟ್ಟೆ


