Un networks
ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಮಂಗಳೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ
ಗಣೇಶೋತ್ಸವ ಮೆರವಣಿಗೆಯಿಂದ ವಾಹನದಟ್ಟಣೆ ಹಿನ್ನೆಲೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಸೆ. 2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಘೋಷಣೆ ನೀಡಲಾಗಿದೆ.
ಸೆ.2ರಂದು ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮವಿದ್ದು ಹಲವೆಡೆ ಗಣೇಶೋತ್ಸವ ಶೋಭಾಯಾತ್ರೆ ನಡೆಯಲಿದೆ ಈ ಸಂದರ್ಭದಲ್ಲಿ
ಜನಸಂಚಾರ ಮತ್ತು ವಾಹನದಟ್ಟಣೆ ಹಿನ್ನೆಲೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಲಾಗಿದೆ.


