UN networks
ಮಂಗಳೂರು: ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನಲೆಯಲ್ಲಿ ಮಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ಕೆಎಸ್ ಆರ್ ಟಿಸಿ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯನ ಸಾಧ್ಯತೆ ಇದೆ.
ಇನ್ನು ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ ವ್ಯಾಪ್ತಿಯಲ್ಲಿ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯತೆ ಸಾಧ್ಯತೆ ಇದ್ದು ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್ಸಾರ್ಟಿಸಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಮೋದಿ ಸಮಾವೇಶ ಸ್ಥಳಕ್ಕೆ ಉಭಯ ಜಿಲ್ಲೆಗಳಿಂದ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಕರೆ ತರಲು 2 ಸಾವಿರ ಬಸ್ ವ್ಯವಸ್ಥೆಗಳ ವ್ಯವಸ್ಥೆ ಮಾಡಲಾಗಿದ್ದು ಈ ಉದ್ದೇಶದಿಂದಲೇ ಸಾರ್ವಜನಿಕರ ಓಡಾಟಕ್ಕೆ ಬಸ್ಸಿನ ಸೌಲಭ್ಯ ಕಡಿಮೆಯಾಗುವ ಸಾಧ್ಯತೆ ಹೆಚ್ಚಿದೆ. ಇನ್ನು ಟ್ರಾಫಿಕ್ ಸಮಸ್ಯೆ ಹಿನ್ನೆಲೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು ಮೈದಾನದ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ವಾಹನಗಳ ನಿಲುಗಡೆ ನಿಷೇಧ ಮಾಡಲಾಗಿದೆ.
