UN networks
ಮಂಗಳೂರು: ನಾಳೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದು ಇದಕ್ಕೆ ಸಂಬಂಧಿಸಿದಂತೆ ಮಂಗಳೂರು ಕಮಿಷನರ್ ನೇತೃತ್ವದಲ್ಲಿ ಸಂಪೂರ್ಣ ಭದ್ರತೆ ಮಾಡಿಕೊಳ್ಳಲಾಗಿದ್ದು ಸುಮಾರು 100 ಜನ ಉನ್ನತ ಪೊಲೀಸ್ ಅಧಿಕಾರಿಗಳು ನಾಳೆ ಇಲ್ಲಿ ಇರಲಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಭೇಟಿ ಹಿನ್ನಲೆ ಮಂಗಳೂರಿಗೆ ಆಗಮಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ
ಗೋಲ್ಡ್ ಫಿಂಚ್ ಸಿಟಿಗೆ ಭೇಟಿ ನೀಡಿ ಸಮಾವೇಶದ ಮೈದಾನವನ್ನು ಪರಿಶೀಲನೆ ನಡೆಸಿ ಮಾತನಾಡಿದರು.
ಪ್ರಧಾನಿಯವರು ಬಂದು ವಾಪಾಸ್ ಹೋಗುವವರೆಗೆ ಎಲ್ಲಾ ಭದ್ರತೆ ಮಾಡಲಾಗಿದೆ. ಡಿಜಿಪಿ ಮತ್ತು ಎಡಿಜಿಪಿಯವರ ಸಂಪೂರ್ಣ ಭದ್ರತೆ ನೋಡಿಕೊಳ್ತಾರೆ
ಸುಮಾರು 2000 ಸಾವಿರ ಸಿವಿಲ್ ಪೊಲೀಸರು ಭದ್ರತೆಗೆ ನೇಮಿಸಲಾಗಿದೆ. ಕೆಎಸ್ಸಾರ್ಪಿ, ಸಿಎಆರ್, ಎಎನ್ ಎಫ್, ಆರ್ ಎಎಫ್, ಕೋಸ್ಟಲ್ ಸೆಕ್ಯೂರಿಟಿ, ಐಎಸ್ ಡಿ ಹಾಗೂ ಗರುಡ ಪಡೆ ಇರುತ್ತದೆ. ಒಟ್ಟಾರೆ ಮೂರು ಸಾವಿರ ಪೊಲೀಸ್ ಭದ್ರತೆ ಇರಲಿದೆ
ಸಂಸದ ನಳಿನ್ ಕುಮಾರ್, ಉಸ್ತುವಾರಿ ಸುನೀಲ್ ಉಸ್ತುವಾರಿ ನೋಡುತ್ತಿದ್ದಾರೆ ಎಂದರು.
ಸಂಸದ ನಳೀನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಶಾಸಕರು ಗೃಹ ಸಚಿವರಿಗೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
