Site icon Ullalavani

ಮಂಗಳೂರಿನ ಹಲವೆಡೆ ಎಸ್ ಡಿಪಿಐ ಮತ್ತು ಪಿಎಫ್ಐ ನಾಯಕರ ಮೇಲೆ ಎನ್ ಐ ಎ ದಾಳಿ

UN networks

ಮಂಗಳೂರು: ಮಂಗಳೂರಿನಲ್ಲಿ ಎಸ್ ಡಿ ಪಿ ಐ ಮತ್ತು ಪಿಎಫ್ ಐ ನಾಯಕರ ಮನೆ ಮತ್ತು ಕಚೇರಿಗಳ ಮೇಲೆ  ಎನ್ ಐ ಎ ದಾಳಿ ನಡೆಸಿದೆ.  ಮಂಗಳೂರಿನ ನೆಲ್ಲಿಕಾಯಿ ರಸ್ತೆಯ ಪಿಎಫ್ ಐ ಮತ್ತು ಎಸ್ ಡಿಪಿಐ ಜಿಲ್ಲಾ ಕಚೇರಿ, ಕುಳಾಯಿ, ಕಾವೂರು, ಜೋಕಟ್ಟೆ, ಬಜಪೆಯ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಮನೆಗಳ ಮೇಲೂ ದಾಳಿ ನಡೆಸಿದೆ.
ಎನ್‌ಐಎ ದಾಳಿ ನಡೆಸುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ  ಜನ ಸೇರಿದ್ದು ಎನ್ ಐಎ ಗೋ ಬ್ಯಾಕ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳದಲ್ಲಿ ಸಿಆರ್ ಪಿಎಫ್ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ‌‌. ಕುಳಾಯಿ ಬಳಿಯ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಸಹೋದರನ ಮನೆ ಮೇಲೂ ದಾಳಿ ನಡೆಸಿದ್ದು ಎನ್ ಐಎ ದಾಳಿ ‌ನಡೆಸಿದ ನೆಲ್ಲಿಕಾಯಿ ರಸ್ತೆಗೆ ‌ಮಂಗಳೂರು ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ.

ಎಸ್ ಡಿಪಿಐ ಮತ್ತು ಪಿಎಫ್ ಐ ಜಿಲ್ಲಾ ಕಚೇರಿ ಇರೋ ನೆಲ್ಲಿಕಾಯಿ ರಸ್ತೆಯಲ್ಲಿ ಭಾರೀ ಸಂಖ್ಯೆಯಲ್ಲಿ ಭಾರಿ ಸಂಖ್ಯೆಯಲ್ಲಿ  ಪ್ರತಿಭಟನಾಕಾರರು ಸೇರಿದ್ದಾರೆ. ಮಂಗಳೂರು ಕಮಿಷನರ್ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ಎತುಭಟನಾಕಾರರ ಜೊತೆ ಮಾತುಕತೆ  ನಡೆಸಿದ್ದು ಪ್ರತಿಭಟನಾಕಾರ ನಿರತ ಪಿಎಫ್ ಐ ಹಾಗೂ ಎಸ್ ಡಿಪಿ ಐ ಕಾರ್ಯಕರ್ತರ ಬಂಧನ ಮಾಡಲಾಗಿದೆ.
ಕಮಿಷನರ್ ಸೂಚನೆ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಪ್ರತಿಭಟನಕಾರರನ್ನು ತುಂಬಿಸಿದ್ದಾರೆ. ಬಂದರು-ನೆಲ್ಲಿಕಾಯಿ ರಸ್ತೆಗೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದೆ.

Exit mobile version