UN networks
ಮಂಗಳೂರು: ಜಿಲ್ಲೆಯ ವಿವಿದೆಡೆ ದಾಳಿ ನಡೆಸಿರುವ ಪೊಲೀಸರು ಪ್ರತಿಭಟನೆ ಹಾಗೂ ಗಲಭೆ ನಡೆಸುವ ಸಾಧ್ಯತೆ ಹಿನ್ನೆಲೆ ಪಿಎಫ್ ಐ ಜಿಲ್ಲಾಧ್ಯಕ್ಷ ಸೇರಿದಂತೆ ಎಂಟು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ, ಕಾವೂರು, ಸುರತ್ಕಲ್, ಬಜಪೆ ಹಾಗೂ ಪುತ್ತೂರು ಭಾಗದಲ್ಲಿ ದಾಳಿ ನಡೆಸಿ
ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹ್ಮದ್, ಮುಖಂಡರಾದ ಫಿರೋಜ್ ಖಾನ್, ರಾಜಿಕ್, ಮುಜಾವರ್, ನೌಫಲ್ ಸೇರಿ ಎಂಟು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದುಕೊಂಡ ಎಲ್ಲರನ್ನು ಠಾಣಾ ವ್ಯಾಪ್ತಿಯ ತಾಲೂಕು ದಂಡಾಧಿಕಾರಿಗಳ ಹಾಗೂ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗಿದೆ. ಬಳಿಕ ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಕರೆತರಲಾಗಿದೆ.ಸಿಆರ್ ಪಿಸಿ 107 ಮತ್ತು 151ರಡಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ.


