ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ಫ್ಯಾಶನ್ ಯುಗದಲ್ಲಿ ಸಂಸ್ಕøತಿಯನ್ನು ಪರಿಚಯಿಸುವ ಪ್ರಯತ್ನ ಮಾಡಿದ ಟೈಲರ್ ಎಸೋಸಿಯೇಶನ್ ನಡೆಸಿರುವುದು ಶ್ಲಾಘನೀಯ ಎಂದು ಮಂಗಳೂರು ಸಂತ ಅಲೋಸಿಯಸ್ ಕಾಲೇಜಿನ ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ಅಭಿಪ್ರಾಯಪಟ್ಟರು.
ಅವರು ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್ ಸೋಮೇಶ್ವರ ವಲಯ ಸಮಿತಿ ಇದರ ವತಿಯಿಂದ ತೊಕ್ಕೊಟ್ಟು ಒಳಪೇಟೆ ಕ್ಲಿಕ್ ಸಭಾಂಗಣದಲ್ಲಿ ನಡೆದ ಆಟಿಡೊಂಜಿ ದಿನ ಮತ್ತು ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್‍ನ ರಾಜ್ಯಾಧ್ಯಕ್ಷ ಬಿ. ವಸಂತ್ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್‍ನ ವಲಯಾಧ್ಯಕ್ಷ ಬಾಲಕೃಷ್ಣ ಪೂಜಾರಿ ಕುಂಪಲ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಸದಸ್ಯ ಪ್ರವೀಣ್ ಸಾಲ್ಯಾನ್, ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್‍ನ ಜಿಲ್ಲಾಧ್ಯಕ್ಷ ಉದಯ ಕುಮಾರ್, ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್‍ನ ಕಾರ್ಯದರ್ಶಿ ಜೈ ಶಂಕರ್, ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್ ನ ನಿಕಟಪೂರ್ವ ಜಿಲ್ಲಾಧ್ಯಕ್ಷ ರಮೇಶ್ ಮಾಡೂರು, ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್‍ನ ಜಿಲ್ಲಾ ಕೋಶಾಧಿಕಾರಿ ಜಯಲಾಕ್ಷ ಕೋಟ್ಯಾನ್, ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್‍ನ ಉಳ್ಳಾಲ ಕ್ಷೇತ್ರ ಅಧ್ಯಕ್ಷ ನಾರಾಯಣ ಕುಂಪಲ, ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್‍ನ ಉಳ್ಳಾಲ ಕ್ಷೇತ್ರ ಕಾರ್ಯದರ್ಶಿ ವೇದಾವತಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಟೈಲರ್ ವೃತ್ತಿಯಲ್ಲಿ ಇದ್ದುಕ್ಕೊಂಡು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿಗಳನ್ನು ಸನ್ಮಾನಿಸಲಾಯಿತು.
ಸತೀಶ್ ಕುಮಾರ್ ಕುಂಪಲ ಸ್ವಾಗತಿಸಿದರು. ನಾರಾಯಣ ಕುಂಪಲ ಪ್ರಸ್ತಾವನೆಗೈದರು. ಆಶಿಕ್ ಮಡ್ಯಾರ್ ಕಾರ್ಯಕ್ರಮ ನಿರ್ವಹಿಸಿದರು. ತಾರನಾಥ ಸಾಲ್ಯಾನ್ ವಂದಿಸಿದರು.