Site icon Ullalavani

ಜ.3 ರಂದು ಕೊಣಾಜೆ ಬೊಲ್ಮ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಚತುರ್ಥ ವರ್ಷದ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

UN networks

ಉಳ್ಳಾಲ: ಕೊಣಾಜೆ ಬೊಲ್ಮ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಚತುರ್ಥ ವರ್ಷದ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಜ. 3ರಂದು ಮಂಗಳವಾರ ನಡೆಯಲಿದೆ.
 ಶ್ರೀ ಕ್ಷೇತ್ರದಲ್ಲಿ  ಬೆಳಗ್ಗೆ 8ರಿಂದ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಸ್ಥಳ ಶುದ್ದೀ, ಗಣಹೋಮ ನಡೆದ ಬೆಳಗ್ಗೆ 9ರಿಂದ 12 ಗಂಟೆಯವರೆಗೆ ಶ್ರೀ ಉಳ್ಳಾಲ್ತಿ ಅಮ್ಮನವರ ಕಲಶ ಪ್ರತಿಷ್ಠೆ, ಕಲಶಾಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಝೆ, ಚಂಡಿಕಾಯಾಗ, ಚಂಡಿಕಾಯಾಗ ಪೂರ್ಣಾಹುತಿಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಮಧ್ಯಾಹ್ನ 1ರಿಂದ ಸಂಜೆ 7ರವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ, ಸಂಜೆ 6ರಿಂದ ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ, ರಾತ್ರಿ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಸಮಿತಿಯ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್ ಹೊಸಮನೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Exit mobile version